2c136fae-be38-4577-97e1-318669006cc9

ಅಳವಂಡಿ : ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 22- ಕೊಪ್ಪಳ ತಾಲ್ಲೂಕಿನ ಅಳವಂಡಿ ಗ್ರಾಮದ ಡಾ ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ಪ್ರಸಕ್ತ ಸಾಲಿನಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅಳವಂಡಿಯ ಡಾ ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಗಣಿತ ಭಾಷಾ ಶಿಕ್ಷಕರ (ಎಂ.ಎಸ್ಸಿ ಅಥವಾ ಬಿ.ಎಸ್ಸಿ ಬಿಎಡ್ ) ಹಾಗೂ ಕಂಪ್ಯೂಟರ್ ಶಿಕ್ಷಕರ (ಬಿ.ಎಸ್ಸಿ, ಎಂ.ಎಸ್ಸಿ, ಬಿಸಿಎ , ಬಿ ಇ ಕಂಪ್ಯೂಟರ್ ಸೈನ್ಸ್ ) ಈ ಎರಡು ಹುದ್ದೆಗಳಿಗೆ ರೂಪಾಯಿ 16,650 ಮಾಸಿಕ ಗೌರವ ಧನವಾಗಿ ನೀಡಲಾಗುವುದು.

ಈ ಹುದ್ದೆಗಳಿಗೆ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸಲು ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕಾಗಿರುವುದರಿಂದ ಅರ್ಹ ಅಭ್ಯರ್ಥಿಗಳು ಆಗಸ್ಟ್ 29ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಅಳವಂಡಿಯ ಡಾ ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!