2c136fae-be38-4577-97e1-318669006cc9

ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ವಿಜಯನಗರ, 17- ಹೊಸಪೇಟೆ ತಾಲೂಕಿನ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ 08 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 45 ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವೈಬ್‌ಸೈಟ್ https://karnemakaone.kar.nic.in/abcd ಮೂಲಕ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟಂಬರ್ 12ರವರೆಗೆ ಅದೇ ರೀತಿ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಆಗಸ್ಟ್ 16 ರಿಂದ ಸೆಪ್ಟೆಂಬರ್ 17ರವರೆಗೆ ಕಾಲಾವಕಾಶ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, 100 ಹಾಸಿಗೆ ಆಸ್ಪತ್ರೆ ರಸ್ತೆ, ಎಂ.ಜೆ.ನಗರ, 9ನೇ ಅಡ್ಡ ರಸ್ತೆ, ಸಿದ್ದೇಶ್ವರ ಪಾರ್ಮ್ ಡಿಸ್ಟಿçಬ್ಯೂರ‍್ಸ್ ಹೌಸ್ ಎದುರುಗಡೆ ಹೊಸಪೇಟೆ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!