KB

ವಿಕಲಚೇತನರ ಶುಲ್ಕ ಮರು ಪಾವತಿ : ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 5- ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ೨೦೨೪-೨೫ನೇ ಸಾಲಿಗೆ ಉನ್ನತ ವ್ಯಾಸಂಗ ಮಾಡುತ್ತಿರುವ ಅರ್ಹ ವಿಕಲಚೇತನರ ಶುಲ್ಕ ಮರುಪಾವತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ನಂತರದ ಉನ್ನತ ವ್ಯಾಸಂಗ ಮಾಡುತ್ತಿರುವ ವಿಕಲಚೇತನರಿಗೆ ಶುಲ್ಕ ಮರುಪಾವತಿ ಸೌಲಭ್ಯ ಒದಗಿಸಲಾಗುತ್ತಿದ್ದು, ಆಸಕ್ತರ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿಯನ್ನು ಕಾಲೇಜು ಮುಖ್ಯಸ್ಥರ ಮೂಲಕ ದೃಢೀಕರಣದೊಂದಿಗೆ ಭರ್ತಿ ಮಾಡಿದ ಅರ್ಜಿಯೊಂದಿಗೆ ಯುಡಿಐಡಿ ಕಾರ್ಡ್, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಖಾತೆ, ಹಿಂದಿನ ವರ್ಷದ ಅಂಕಪಟ್ಟಿ, ಶುಲ್ಕ ಪಾವತಿ ರಶೀದಿ, ಆಧಾರ್‌ಕಾರ್ಡ್ ಪ್ರತಿಯನ್ನು ಲಗತ್ತಿಸಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ ೩೧,೩೨ ರಿಲಾಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆ ಹೊಸಪೇಟೆ ರಸ್ತೆ ಕೊಪ್ಪಳ ಇವರಿಗೆ ನವೆಂಬರ್ ೩೦ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೊನೆಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ತಾಲೂಕು ಎಂ.ಆರ್.ಡಬ್ಲ್ಯೂ.ಗಳಾದ ಕೊಪ್ಪಳದ ಜಯಶ್ರೀ ಮೊ.ಸಂ: ೯೯೮೦೧೨೬೩೯೧, ಯಲಬುರ್ಗಾದ ಬಸವರಾಜ ಮೊ.ಸಂ: ೯೫೯೧೯೨೩೯೧೦, ಕುಷ್ಟಗಿಯ ಚಂದ್ರಶೇಖರ ಮೊ.ಸಂ: ೯೯೧೬೩೦೮೫೮೫, ಗಂಗಾವತಿಯ ಮಂಜುಳಾ ಮೊ.ಸಂ: ೮೧೨೩೬೩೩೦೨೭ ಹಾಗೂ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರದ ದೂರವಾಣಿ ಸಂಖ್ಯೆ ೦೮೫೩೯-೨೯೫೪೯೬ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕ¯ರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!