ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದೇಶಿ ಸಾಲ ಯೋಜನೆ : ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 29- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲಿಚ್ಛೀಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದೇಶಿ ಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ವಿದೇಶದಲ್ಲಿ ವ್ಯಾಸಂಗ ಮಾಡ ಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಕೋರ್ಸಗಳನ್ನು ವಿದ್ಯಾಭ್ಯಾಸ ಮಾಡಲು ವಿದೇಶಿ ವಿದ್ಯಾಭ್ಯಾಸ (ಓವರ್ಸೀಸ್ ಎಜುಕೇಶನ್) ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್‌ಸೈಟ್ kmdconline.karnataka.gov.in ನಲ್ಲಿ ಆಗಷ್ಟ್ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಪ್ಪಳ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ: 08539-225008ಗೆ ಸಂಪರ್ಕಿಸಬಹುದು ಎಂದು ಕೆ.ಎಂ.ಡಿ.ಸಿ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.