ಐಎಎಸ್, ಕೆಎಎಸ್ ತರಬೇತಿಗೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ವಿಜಯನಗರ, 24- 2024-25ನೇ ಸಾಲಿನ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು, ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ https://sevasindhu.karnataka.gov.in, sevasindhu, departmentservices ವೆಬ್ಸೈಟ್ ಮೂಲಕ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಯು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ಸರ್ಕಾರದಿಂದ ಶಾಸನಬದ್ದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು.
ಕನಿಷ್ಠ 21 ಹಾಗೂ ಗರಿಷ್ಠ ವಯೋಮಿತಿ 35 ವರ್ಷಗಳು ಮೀರಿರಬಾರದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಇದಕ್ಕೆ ಅರ್ಹರಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ http://dom.karnataka.gov.in ಅನ್ನು ವೀಕ್ಷಿಸಿ ಹಾಗೂ ಹತ್ತಿರದ ಜಿಲ್ಲಾ ಕಚೇರಿ ಮತ್ತು ಜಿಲ್ಲಾ ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಣೆಯಲ್ಲಿ ತಿಳಿಸಿದಾರೆ.
