
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ವಿಜಯನಗರ, 21- ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಾದ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ಸಾಲ ಯೋಜನೆ), ಜೀಜಾವು ಜಲಭಾಗ್ಯ ಯೋಜನೆಯ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹು ಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಮರಾಠ ಮಿಲ್ಟಿç ಹೋಟೆಲ್ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಹಾಗೂ ಸ್ವಾತಂತ್ರ್ಯ ಮಹೋತ್ಸವ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ, ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾAಶದಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು.
ವಿಶೇಷ ಸೂಚನೆ: ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಈ ಎಲ್ಲಾ ಯೋಜನೆಗಳಲ್ಲಿ ಸೌಲಭ್ಯ ಅರ್ಜಿ ಸಲ್ಲಿಸುವ ಮರಾಠ ಸಮುದಾಯ ಅರ್ಜಿದಾರರು ಸೇವಾಸಿಂಧು ಪೋರ್ಟಲ್‌ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಗಳ ಮೂಲಕ ಆನ್‌ಲೈನಲ್ಲಿ ಮತ್ತು ಸ್ವಾತಂತ್ರ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ತಂತ್ರಾಶ https://www.kaushalkar.com ಮೂಲಕ ಆಗಸ್ಟ್ ೩೧ರೊಳಗೆ ಅರ್ಜಿ ಸಲ್ಲಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ ಯೋಜನೆಯ ಅರ್ಹತೆ, ಮತ್ತು ಸಲ್ಲಿಸುವ ದಾಖಲಾತಿಗಳ ಕುರಿತು ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ಜಾಲತಾಣ https://kmcdc.karnataka.gov.in ಗೆ ಮತ್ತು ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ವೀರನಗೌಡ ಕಾಲೋನಿ, ಶ್ರೀ ಕುಮಾರಸ್ವಾಮಿ ಗುಡಿ ಎದುರು, ಕ್ಲಬ್ ರೋಡ್ ಬಳ್ಳಾರಿ ದೂರವಾಣಿ ಸಂಖ್ಯೆ :08392-267038ನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ಹೊಸಪೇಟೆಯ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.