ಜರ್ಮನಿಯಲ್ಲಿ ನರ್ಸಿಂಗ್ ಉದ್ಯೋಗವಕಾಶಕ್ಕಾಗಿ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ವಿಜಯನಗರ, 24- ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೆ|| ಟ್ಯಾಲೆಂಟ್ ಆರೆಂಜ್ ಸಂಸ್ಥೆ ಮತ್ತು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರಾತಾ ಮಂಡಳಿ ಸಹಯೊಗದೊಂದಿಗೆ ಭಾರತ ದೇಶದಿಂದ ಜರ್ಮನಿಯಲ್ಲಿ ನರ್ಸ ಆಗಿ ಕೆಲಸ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಉತ್ಸುಕ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗ ಕಲ್ಪಿಸಲು ಈ ಸಂಸ್ಥೆಯಿಂದ ಅರ್ಹರನ್ನು ಆಯ್ಕೆ ಮಾಡಿ 8 ತಿಂಗಳ ಕಾಲ ಕೇರಳದ ತಿರುನಂತಪುರದಲ್ಲಿ ಉಚಿತ ಊಟ ಮತ್ತು ವಸತಿಯೊಂದಿಗೆ ಜರ್ಮನಿ ಭಾಷೆಯ ಕುರಿತು ತರಬೇತಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಬಿಎಸ್ಸಿ ನರ್ಸಿಂಗ್, ಜಿ.ಎನ್.ಎಮ್ ಪುರುಷ ಮತ್ತು ಮಹಿಳೆ, ಕಡ್ಡಾಯವಾಗಿ ಭಾರತೀಯ ನರ್ಸಿಂಗ್ ಲೈಸನ್ಸ್ ಹೊಂದಿರಬೇಕು., 38 ವರ್ಷ ಒಳಗಿರುವ ಅನುಭವಿ ಮತ್ತು ಹೊಸಬರು ಅರ್ಜಿ ಸಲ್ಲಿಸಬಹುದಾಗಿದೆ. ಮಹಿಳಾ ಸಿಬ್ಬಂದಿಯು ಚಿಕ್ಕ ಮಕ್ಕಳನ್ನು ಹೊಂದಿದ್ದಲ್ಲಿ ತಮ್ಮೊಂದಿಗೆ ಕರೆದೊಯ್ಯಲು ಅವಕಾಶ ಇರುವುದಿಲ್ಲ.
ಸ್ವ-ವಿವರ (ರೆಸ್ಯೂಮ್) ದೊಂದಿಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಇಲಾಖೆ ಉಪ ವಿಭಾಗಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
