
ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 30- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
30ದಿನಗಳ ಮೊಬೈಲ್ ದುರಸ್ತಿ ಮತ್ತು ಸರ್ವೀಸಿಂಗ್ , 45ದಿನಗಳ ಕಂಪ್ಯೂಟರ್ ಡೆಸ್ಕಾಟಾಪ್ ಪಬ್ಲಿಷಿಂಗ ತರಬೇತಿ , 30ದಿನಗಳ ಟೂ ವ್ಹೀಲರ ರಿಪೇರಿ ಹಾಗೂ 10ದಿನಗಳ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು 18ರಿಂದ 45ವರ್ಷ ಒಳಗಿನವರಾಗಿರಬೇಕು. ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು.
ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತರು ತಮ್ಮ ಆಧಾರ ಕಾರ್ಡ ಜೆರಾಕ್ಸ್ ಪ್ರತಿ, ರೇಶನ್ ಕಾರ್ಡ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಸೈಜ್ ಮೂರು ಫೋಟೋ, ಮಾರ್ಕ್ಸಕಾರ್ಡ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ನಿರ್ದೇಶಕರು, ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ದೂ.ಸಂ: ೦೮೫೩೯-೨೩೧೦೩೮, ಮೊ.ಸಂ: ೯೪೮೩೬೧೮೧೭೮, ೯೪೮೧೦೮೫೨೧೭, ೭೨೫೯೦೭೩೮೨೭, ೯೫೩೮೦೯೬೭೯೬ ಗೆ ಸಂಪರ್ಕಿಸಬಹುದಾಗಿದೆ.
ಸ್ವಯಂ ಉದ್ಯೋಗ ತರಬೇತಿಗಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. ತರಬೇತಿಗಾಗಿ ನವೆಂಬರ್ ೦೯ರಂದು ಸಂದರ್ಶನ ನಡೆಯಲಿದ್ದು, ನವೆಂಬರ್ ೧೧ರಿಂದ ತರಬೇತಿ ಪ್ರಾರಂಭವಾಗಲಿವೆ ಎಂದು ಕೊಪ್ಪಳ ಎಸ್‌ಬಿಐ ಆರ್‌ಸಿಟಿ ನಿರ್ದೇಶಕರು ತಿಳಿಸಿದ್ದಾರೆ.