
ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜು : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 26- ಕೊಪ್ಪಳ ಜಿಲ್ಲೆಯ ದಿಡ್ಡಿಕೇರಿಯಲ್ಲಿನ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭೌತಶಾಸ್ತç, ರಸಾಯನಶಾಸ್ತç, ಗಣಿತ, ಜೀವಶಾಸ್ತç, ಕನ್ನಡ, ಆಂಗ್ಲ ಹಾಗೂ ಉರ್ದು ವಿಷಯ ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದು, ಎಂ.ಎಸ್‌ಸಿ. ಭೌತಶಾಸ್ತç, ಎಂ.ಎಸ್‌ಸಿ. ರಸಾಯನಶಾಸ್ತç, ಎಂ.ಎಸ್‌ಸಿ ಗಣಿತ, ಎಂ.ಎಸ್‌ಸಿ ಜೀವಶಾಸ್ತç, ಎಂ.ಎ (ಕನ್ನಡ), ಎಂ.ಎ (ಆಂಗ್ಲ), ಎಂ.ಎ (ಉರ್ದು) ವಿದ್ಯಾರ್ಹತೆಯೊಂದಿಗೆ ಬಿ.ಎಡ್ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ ಜೊತೆಗೆ 2 ವರ್ಷ ಸೇವಾನುಭವ ಹೊಂದಿರಬೇಕು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 1 ರೊಳಗಾಗಿ ನೇರವಾಗಿ ಅಲ್ಪ ಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜನಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ತಮ್ಮ ವಿದ್ಯಾರ್ಹತೆಗೆ ಸಂಬAಧಿಸಿದ ಎಲ್ಲಾ ದಾಖಲಾತಿಗಳೊಂದಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಲ್ಪ ಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಮತ್ತು ದೂ.ಸಂ: 9900617290 ಗೆ ಸಂಪರ್ಕಿಸಬಹುದಾಗಿದೆ ಎಂದು ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.