2c136fae-be38-4577-97e1-318669006cc9

ವೀರಶೈವ ಲಿಂಗಾಯತ ಸಮುದಾಯ ಅಭಿವೃದ್ಧಿ ನಿಗಮದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 21- ಕರ್ನಾಟಕ ವೀರಶೈವ ಲಿಂಗಾಯತ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ವೀರಶೈವ ಲಿಂಗಾಯತ ಸಮುದಾಯ ನಿಗಮದ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ ಯೋಜನೆಗಳ ಅಡಿಯಲ್ಲಿ ಬಸವ ಬೆಳಗು ಯೋಜನೆ,(ಹೊಸದು ಮತ್ತು ನವೀಕರಣ), ವಿದೇಶ ವಿಕಾಸ ಯೋಜನೆ (ಹೊಸದು ಮತ್ತು ನವೀಕರಣ), ಜೀವಜಲ ಯೋಜನೆ, ಕಾಯಕಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಹಾಗೂ ಸ್ವಾತಂತ್ರ‍್ಯ ಮಹೋತ್ಸವ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ, ಈ ಎಲ್ಲಾ ಯೋಜನೆಗಳಡಿ ಸೌಲಭ್ಯಕ್ಕೆ ಅರ್ಹ ಫಲಾನುಭವಿಗಳು ಸೇವಾ ಸಿಂಧು ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಿಶೇಷ ಸೂಚನೆ : ಒಂದು ಬಾರಿ ನಿಗಮಗದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಈ ಎಲ್ಲಾ ಯೋಜನೆಗಳಲ್ಲಿ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವ ಕರ್ನಾಟಕ ವೀರಶೈವ ಲಿಂಗಾಯತ ಸಮುದಾಯ ಅರ್ಜಿದಾರರು ಸೇವಾಸಿಂಧು ಪೋರ್ಟಲ್‌ನಲ್ಲಿ ಗ್ರಾಮಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಗಳ ಮೂಲಕ ಮತ್ತು ಸ್ವಾತಂತ್ರ ಅಮೃತ ಮುನ್ನಡ ಯೋಜನೆಗೆ ಕೌಶಲ್ಯ ಕರ್ನಾಟಕ ತಂತ್ರಾಶ https://www.kaushalkar.com ನಲ್ಲಿ ಆಗಸ್ಟ್ 30ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಯೋಜನೆಯ ಅರ್ಹತೆ, ಮತ್ತು ಸಲ್ಲಿಸುವ ದಾಖಲಾತಿಗಳ ಕುರಿತು ಕರ್ನಾಟಕ ವೀರಶೈವ ಲಿಂಗಾಯತ ಸಮುದಾಯ ಅಭವೃದ್ಧಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080-22865522, ಮೊಬೈಲ್ ಸಂಖ್ಯೆ 9900012351 ಅಥವಾ ಕೊಪ್ಪಳದ ಜಿಲ್ಲಾ ಕಛೇರಿ ಸಂಖ್ಯೆ 08539-221847 ಗೆ ಸಂಪರ್ಕಿಸುವುದು ಅಥವಾ ಆಯಾ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದವರ ಕಚೇರಿಯವರನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಸಮುದಾಯ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!