2c136fae-be38-4577-97e1-318669006cc9

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 18- 2024 -25ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಾದ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) , ಹೊಲಿಗೆ ಯಂತ್ರ ವಿತರಣೆ ಯೋಜನೆ ಹಾಗೂ ಸ್ವಾತಂತ್ರ‍್ಯ ಮಹೋತ್ಸವ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಿಶೇಷ ಸೂಚನೆ: ವಿವಿಧ ಯೋಜನೆಗಳು ಅಡಿಯಲ್ಲಿ ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ. ಮತ್ತು ಒಂದು ಬಾರಿ ನಿಗಮಗದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

2023-24ನೇ ಸಾಲಿನಲ್ಲಿ ಆನ್‌ಲೈನ್‌ನಲ್ಲಿ ಈ ಯೋಜನೆಗಳಲ್ಲಿ ಸೌಲಭ್ಯ ಆರ್ಜಿ ಸಲ್ಲಿಸುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅರ್ಜಿದಾರರು ಸೇವಾಸಿಂಧು ಪೋರ್ಟಲ್ ನ ಗ್ರಾಮಒನ್ / ಬೆಂಗಳೂರು ಒನ್ / ಕರ್ನಾಟಕ ಒನ್ ಗಳ ಮೂಲಕ ಆನ್‌ಲೈನಲ್ಲಿ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu, karnataka.gov.in , ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಮತ್ತು ಕ್ರಮಸಂಖ್ಯೆ 07 ರಲ್ಲಿನ ಸ್ವಾತಂತ್ರ ಅಮೃತ ಮುನ್ನಡ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ತಂತ್ರಾಶದ https://www.kaushalkar.com ನಲ್ಲಿ ಅರ್ಜಿಯನ್ನು ಸಲ್ಲಿಸಲು ಆಗಸ್ಟ್ 31ರೊಳಗೆ ಸಲ್ಲಿಸ ಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಯೋಜನೆಯ ಅರ್ಹತೆ, ಮತ್ತು ಸಲ್ಲಿಸುವ ದಾಖಲಾತಿಗಳ ಕುರಿತು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಾಲತಾಣ https://dbcdc.karnataka.gov.in ಅಥವಾ ಹೆಚ್ಚಿನ ಮಾಹಿತಿಗಾಗಿ ನಿಗಮದ ದೂರವಾಣಿ ಸಂಖ್ಯೆ 080-22374832 ಮತ್ತು ಮೊಬೈಲ್ ಸಂಖ್ಯೆ: 8050770004, 8050770005 ಗೆ ಅಥವಾ ಕೊಪ್ಪಳ ಕಚೇರಿ ದೂ.ಸಂ: 08539-221847 ಗೆ ಸಂಪರ್ಕಿಸುವುದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!