ಕರ್ನಾಟಕ ವಿಶ್ವ ಕರ್ಮ ಸಮುದಾಯದ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 18- ಕರ್ನಾಟಕ ವಿಶ್ವ ಕರ್ಮ ಸಮುದಾಯದ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದ ವಿವಿಧ ಯೋಜನೆಗಳಾದ ಪಂಚವೃತ್ತಿ ಅಭಿವೃದ್ಧಿಗಾಗಿ ಅರ್ಥಿಕ ನೆರವು, ಸ್ವಯಂ ಉದ್ಯೋಗ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸದು & ನವೀಕರಣ), ಗಂಗಾ ಕಲ್ಯಾಣ ನೀರಾವರಿ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ ಸ್ವಾತಂತ್ರö್ಯ ಮಹೋತ್ಸವ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳಡಿ ವಿಶ್ವ ಕರ್ಮ ಸಮುದಾಯದ ಅರ್ಹರು ಸೇವಾ ಸಿಂಧು ತಂತ್ರಾAಶದ ಮೂಲಕ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.
ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಈ ಯೋಜನೆಗಳಲ್ಲಿ ಸೌಲಭ್ಯ ಆರ್ಜಿ ಸಲ್ಲಿಸುವ ವಿಶ್ವ ಕರ್ಮ ಸಮುದಾಯದ ಅರ್ಜಿದಾರರು ಸೇವಾಸಿಂಧು ಪೋರ್ಟಲ್ ನ ಗ್ರಾಮಒನ್ / ಬೆಂಗಳೂರು ಒನ್ / ಕರ್ನಾಟಕ ಒನ್ ಗಳ ಮೂಲಕ ಆನ್ಲೈನಲ್ಲಿ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu, karnataka.gov.in , ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಮತ್ತು ಕ್ರಮ ಸಂಖ್ಯೆ 07 ರಲ್ಲಿನ ಸ್ವಾತಂತ್ರ ಅಮೃತ ಮತ್ತು ಕ್ರಮ ಸಂಖ್ಯೆ 09 ರಲ್ಲಿನ ಸ್ವಾತಂತ್ರ ಅಮೃತ ಮುನ್ನಡ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ತಂತ್ರಾಶದ https://www.kaushalkar.com ನಲ್ಲಿ ಅರ್ಜಿಯನ್ನು ಸಲ್ಲಿಸಲು ಅಗಸ್ಟ್ 31ರೊಳಗೆ ಸಲ್ಲಿಸ ಬಹುದಾಗಿದೆ.
ಯೋಜನೆಗಳಡಿ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ ಮತ್ತು ಅಗತ್ಯ ದಾಖಲಾತಿಗಳ ಕುರಿತು ವಿಶ್ವ ಕರ್ಮ ಸಮುದಾಯದ ನಿಗಮದ ಜಾಲತಾಣ ವೆಬ್ಸೈಟ್ https://kvcdcl.karnataka.gov.in ನಲ್ಲಿ ವಿಕ್ಷೀಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ದೂರವಾಣಿ ಸಂಖ್ಯೆ 080-22374848 ಮತ್ತು ಮೊಬೈಲ್ ಸಂಖ್ಯೆ : 7899899039 ಗೆ ಸಂಪರ್ಕಿಸುವುದು ವಿಶ್ವ ಕರ್ಮ ಸಮುದಾಯದ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
