ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಪ್ರೋತ್ಸಾಹಧನಕ್ಕಾಗಿ ಅರ್ಜಿ ಅಹ್ವಾನ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 9- ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ ನೀಡಲು ಉದ್ದೇಶಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೆರೆಬ್ರಲ್ ಪಾಲ್ಸಿ, ಡಿಸ್ಟೊಫಿ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಲೆ÷್ಕರೋಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ ೧,೦೦೦ ರೂ. ಗಳನ್ನು ನೀಡಲಾಗುತ್ತದೆ.

ಅರ್ಜಿಗಳನ್ನು ಜಿಲ್ಲಾ ಅಂಗವಿಕಲರ ಕಲ್ಯಣಾಧಿಕಾರಿಗಳ ಕಚೇರಿಯಿಂದ ಪಡೆದು, ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ, ಇದೇ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅ.೩೦ ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.೦೮೩೯೨-೨೬೭೮೮೬ ಹಾಗೂ ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲೂö್ಯ)ಗಳಾದ ಬಳ್ಳಾರಿ-೮೮೮೦೮೭೫೬೨೦, ಕುರುಗೋಡು-೯೫೩೮೦೦೦೮೮೭, ಸಿರುಗುಪ್ಪ-೯೭೪೩೫೦೯೬೯೮, ಸಂಡೂರು-೯೬೩೨೦೫೨೨೭೦ ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!