
ಅಳವ0ಡಿ : ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 28- ತಾಲೂಕಿನ ಅಳವಂಡಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ಪ್ರಸಕ್ತ ಸಾಲಿನಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಡಾ ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಅಳವಂಡಿ ತಾ.ಜಿ ಕೊಪ್ಪಳ, ಈ ಶಾಲೆಯ ೨೦೨೪-೨೫ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಇಂಗ್ಲಿಷ ಭಾಷಾ ಶಿಕ್ಷಕರ (ಬಿ.ಎ.ಬಿಎಡ್ ಅಥವಾ ಎಂ.ಎ.ಬಿಎಡ್) ಹಾಗೂ ಕಂಪ್ಯೂಟರ್ ವಿಷಯದ (ಬಿಎಸ್‌ಸಿ/ಎಂಎಸ್‌ಸಿ ಕಂಪ್ಯೂಟರ್/ಬಿಸಿಎ/ಬಿಇ ಕಂಪ್ಯೂಟರ್ ಸಾಯಿನ್ಸ್) ಅತಿಥಿ ಶಿಕ್ಷಕರ ಹುದ್ದೆಗೆ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸಲು ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಮೆರಿಟ್ ಮತ್ತು ಪಾಠ ಪರೀವಿಕ್ಷಣೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಅಳವಂಡಿಯಲ್ಲಿ ನವೆಂಬರ್ ೧೦ ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ:೭೦೧೯೧೮೭೨೧೦ ಗೆ ಸಂಪರ್ಕಿಸಬಹುದಾಗಿದೆ ಎಂದು ಅಳವಂಡಿಯ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.