
ಮೀನುಮರಿಗಳ ಮಾರಾಟ : ಆಸಕ್ತರಿಂದ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ವಿಜಯನಗರ, 24- ಮೀನುಗಾರಿಕೆ ಇಲಾಖೆಯಿಂದ ೨೦೨೪-೨೫ನೇ ಸಾಲಿನ ವಿವಿಧ ಯೋಜನೆಗಳ ಅಡಿ ಮೀನು ಸಾಕಾಣಿಕೆ ಮಾಡುವವರಿಗೆ ಉತ್ತಮ ತಳಿಯ ಮೀನುಮರಿಗಳನ್ನು ಸರಬರಾಜು ಮಾಡುಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರ ನಿಗದಿಪಡಿಸಿರುವ ದರದಲ್ಲಿ (ಸಾಗಣಿಕೆ ವೆಚ್ಚ ಸೇರಿ) ಅನ್ಮದಾನದ ಲಭ್ಯತೆಗೆ ಅನುಗುಣವಾಗಿ ಮೀನುಮರಿಗಳನ್ನು ಸರಬರಾಜು ಮಾಡಲು ಮೀನುಗಾರಿಕೆ ಇಲಾಖೆಯಲ್ಲಿ ನೋಂದಾಯಿಸಿರುವ ಆಸಕ್ತ ಮೀನುಮರಿ ಸಾಕಾಣಿಕೆದಾರರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟಂಬರ್ ೨೯ ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ವಲಯ, ತಾಲೂಕು ಮತ್ತು ಜಿಲ್ಲಾ ಮಟ್ಟದ ಮೀನುಗಾರಿಕೆ ಇಲಾಖೆಯ ಕಚೇರಿಗೆ ಭೇಟಿ ನೀಡಬಹುದು ಅಥವಾ ಇಲಾಖೆಯ ವೆಬ್‌ಲೈಟ್ ಆದ ತಿತಿತಿ.ಜಿisheಡಿies.ಞಚಿಡಿಟಿಚಿಣಚಿಞಚಿ.gov.iಟಿಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.