WhatsApp Image 2024-08-13 at 5.02.30 PM

ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಜಾಗೃತಿ ಶಿಬಿರ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 13- ಬಳ್ಳಾರಿ ಹೋಟೆಲ್ ಓನರ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಜಾಗೃತಿ ಶಿಬಿರವು ಬಳ್ಳಾರಿ ಜಿಲ್ಲಾ ವಾಣಿಜ್ಜ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ನಡೆಯಿತು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು ಅವರು, ಸಂಸ್ಥೆ ನಡೆದುಬಂದ ದಾರಿ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಆಹಾರ ಸುರಕ್ಷತಾ ಅಧಿಕಾರಿ ಶ್ರೀಮತಿ ನಂದಾಕಡಿ ಅವರು, ಆಹಾರ ಮತ್ತು ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಸುರಕ್ಷತೆ ಮತ್ತು ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು. ಸೇವನೆಗೆ ಯೋಗ್ಯವಾದ ಆಹಾರವನ್ನು ತಯಾರಿಸಲು ಆದ್ಯತೆ ನೀಡಬೇಕು ಎಂದರು.

ಆಹಾರ ಗುಣಮಟ್ಟ ಕಾಪಾಡಿಕೊಳ್ಳುವ ಕಾಯ್ದೆಯು ಜನಪರವಾಗಿದೆ. ಎಲ್ಲಾ ರೀತಿಯ ಆಹಾರ ಪದಾರ್ಥಗಳ ಆಹಾರ ವಸ್ತುಗಳ ಉತ್ಪಾದಕರು, ಪ್ಯಾಕರ್‌ಗಳು, ಸಾಗಣೆದಾರರು, ಆಹಾರ ಸಂಸ್ಕರಣೆ ಮಾಡುವವರು, ವಿತರಕರು, ಹೋಟೆಲ್, ರೆಸಾರ್ಟ್, ಕ್ಯಾಂಟೀನ್, ಮೊಬೈಲ್ ವ್ಯವಸ್ಥೆಯಲ್ಲಿ ಆಹಾರ ಮಾರಾಟಗಾರರು, ವೈನ್ ಸ್ಟೋರ್, ಕ್ಲಬ್‌ಗಳು, ಬಾರ್ ಅಂಡ್ ರೆಸ್ಟೋರೆಂಟ್ಗಳು, ಬೇಕರಿ, ಸಿಹಿತಿಂಡಿ, ಹಾಲು, ಹಾಲಿನ ಉತ್ಪನ್ನ, ಪ್ಯಾಕೇಜ್ಡ್ ಕುಡಿಯುವ ನೀರುಘಟಕ ಇನ್ನಿತರರು ಆಹಾರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದರು.

ಜನತಾ ಹೋಟಲ್‌ನ ಗುರು, ರೇಣುಕಾ ಹೋಟಲ್‌ನ ವಿಶ್ವನಾಥ್, ಹೋಟಲ್ ಓನರ್ಸ್ ಅಸೋಸಿಯೇಷನ್‌ನ ಅಧ್ಯಕ್ಷ ಮಧು, ಕಾರ್ಯದರ್ಶಿ ಪೋಲ ವಿಕ್ರಂ ಪೋಲ ಹಾಗೂ ಹೋಟೆಲ್ ಓನರ್ಸ್ ಅಸೋಸಿಯೇಷನ್ ಪದಾಧಿಕಾರಿಗಳು, ಜನರಲ್ ಮ್ಯಾನೇಜರ್‌ಗಳು ಈ ಸಭೆಯಲ್ಲಿ ಬಾಗವಹಿಸಿ, ಗುಣಮಟ್ಟದ ಆಹಾರ ಸಿದ್ದಪಡಿಸಲು ಪ್ರಥಮ ಆದ್ಯತೆ ನೀಡುವುದಾಗಿ ಹೇಳಿದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ. ಮರ್ಚೇಡ್ ಮಲ್ಲಿಕಾರ್ಜುನ ಗೌಡ ಅವರು ಸ್ವಾಗತ ಕೋರಿದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ¸ಂಸ್ಥೆವತಿಯಿAದ ಸಂಸ್ಥೆಯ ಅಧ್ಯಕ್ಷ ಬಿ. ಮಹಾರುದ್ರಗೌಡ, ಹಿರಿಯ ಉಪಾಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ, ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು ಅವರು ಶ್ರೀಮತಿ ನಂದಾಕಡಿ ಅವರನ್ನು ಸನ್ಮಾನಿಸಿ, ಗೌರವಿಸಿದರು.

ಎಲ್ಲಾ ಹೋಟಲ್‌ನ ಓನರ್ಸ್ ಅಸೋಸಿಯೇಷನ್ ಪದಾಧಿಕಾರಿಗಳು, ಜನರಲ್ ಮ್ಯಾನೇಜರ್‌ಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!