
ಸಂಡೂರು ಉಪ ಚುನಾವಣೆ : ಜಿಲ್ಲೆಯ ಗಡಿ ಭಾಗದಲ್ಲಿ ಮದ್ಯ ಮಾರಾಟ ನಿಷೇಧ
ಕರುನಾಡ ಬೆಳಗು ಸುದ್ದಿ
ವಿಜಯನಗರ, 7- ನವಂಬರ್ 13 ರಂದು ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಸಂಡೂರಿಗೆ ಹೊಂದಿಕೊಂಡ ಹೊಸಪೇಟೆ ಮತ್ತು ಕೂಡ್ಲಿಗಿಯ ಗಡಿ ಭಾಗದ ೫ ಕಿಲೋ ಮೀಟರ್ ವ್ಯಾಪ್ತಿಯ ಒಳಗಡೆ ಮದ್ಯ ತಯಾರಿಕೆ, ಸಾಗಾಣಿಕೆ ಹಾಗೂ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಂ.ಎಸ್.ದಿವಾಕರ ಅದೇಶಿಸಿದ್ದಾರೆ.
ನವೆಂಬರ್ ೧೧ರ ಸಂಜೆ ೬ ರಿಂದ ನವೆಂಬರ್ ೧೩ರ ಸಂಜೆ ೬ ಗಂಟೆಯವರೆಗೆ ಹೊಸಪೇಟೆ ಮತ್ತು ಕೂಡ್ಲಿಗಿಯ ಗಡಿ ಭಾಗದ ಜಿಲ್ಲೆಯ ೫ ಕಿಲೋ ಮೀಟರ್ ವ್ಯಾಪ್ತಿಯ ಒಳಗಡೆ ಬರುವ ಎಲ್ಲ ತರಹದ ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್, ಡಾಬಾಗಳಲ್ಲಿ ಮತ್ತು ಸಾರ್ವಾಜನಿಕ ಹಾಗೂ ಖಾಸಗಿ ಸ್ಥಳಗಳಲ್ಲಿ ಮದ್ಯ ತಯಾರಿಕೆ, ಸಾಗಾಣಿಕೆ ಹಾಗೂ ಮಾರಾಟ ನಿಷೇಧಿಸಲಾಗಿದೆ.