4

ಪ್ರವೀಣ್ ಕಿತ್ನೂರಗೆ ಬಾಪೂಜಿ ಪ್ರಬಂಧ ಸ್ಪರ್ಧೆಯ ರಾಜ್ಯಮಟ್ಟದ ಬಹುಮಾನ

ಕರುನಾಡ ಬೆಳಗು ಸುದ್ದಿ

ವಿಜಯನಗರ, 4- ಇಲ್ಲಿಗೆ ಸಮೀಪದ ಹಂಪಿ ಕನ್ನಡ ವಿವಿಯ ಸ್ನಾತಕೋತ್ತರ ವಿದ್ಯಾರ್ಥಿ ಪ್ರವೀಣ್ ನಿಂಗಪ್ಪ ಕಿತ್ನೂರ್ ಅವರು ಬರೆದ ಗಾಂಧೀಜಿಯವರ ಸ್ವರಾಜ್ ಮತ್ತು ಆರ್ಥಿಕ ಚಿಂತನೆಗಳು ಪ್ರಬಂಧವು ವಾರ್ತಾ ಇಲಾಖೆ ಏರ್ಪಡಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದೆ.

ಬೆಂಗಳೂರಿನ ವಾರ್ತಾಸೌಧದಲ್ಲಿ ಅಕ್ಟೋಬರ್ 2ರಂದು ನಡೆದ ಸಮಾರಂಭದಲ್ಲಿ ಬಹುಮಾನ ವಿಜೇತ ಪ್ರವೀಣ್ ಗೆ 31 ಸಾವಿರ ರೂ.ನಗದು ಹಾಗೂ ಪುರಸ್ಕಾರ ನೀಡಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಗೌರವಿಸಿದರು.

ಈ ವೇಳೆ ಶಾಸಕ ರಿಜ್ವಾನ್ ಅರ್ಷದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ವಾರ್ತಾ ಇಲಾಖೆಯ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕಚಂದ್ರ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ ಇದ್ದರು.

Leave a Reply

Your email address will not be published. Required fields are marked *

error: Content is protected !!