
ಸಿ.ಎಂ.ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರು ಚಲೋ ಪಾದಯಾತ್ರೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 6- ಸಿ.ಎಂ.ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಇಲ್ಲಿನ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪದಾಧಿಕಾರಿಗಳು ನಾಯಕರೊಂದಿಗೆ ಹೆಜ್ಜೆ ಹಾಕಲು ಮಂಗಳವಾರ ನಗರದಿಂದ ಮೈಸೂರಿಗೆ ಖಾಸಗಿ ಬಸ್ ಮೂಲಕ ಪ್ರಯಾಣ ಬೆಳೆಸಿದರು.
ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣಪಾಲ್ ಐನಾಥ ರೆಡ್ಡಿ ಅವರ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ರೈತ ಮುಖಂಡರು ಮೈಸೂರಿಗೆ ಪ್ರಯಾಣ ಬೆಳೆಸಿದರು. ಇದಕ್ಕೂ ಮುನ್ನ ನಗರದ ಅಧಿದೇವತೆ ಶ್ರೀ ಕನಕ ದುರ್ಗಮ್ಮ ದೇವಿ ದೇಗುಲದಲ್ಲಿ ಪಾದಯಾತ್ರೆ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ, ಅರ್ಚನೆ ಸಲ್ಲಿಸಿ ಪ್ರಯಾಣ ಬೆಳೆಸಿದರು.
ಈ ವೇಳೆ ಬಳ್ಳಾರಿ ಜಿಲ್ಲಾ ರೈತ ಮೋರ್ಚ ಅಧ್ಯಕ್ಷ ಗಣಪಾಲ ಐನಾಥ ರೆಡ್ಡಿ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಭಾಗವಹಿಸಲು ಬಿಜೆಪಿ ರೈತ ಮೋರ್ಚಾ ವತಿಯಿಂದ 50ಕ್ಕೂ ಹೆಚ್ಚು ರೈತರು ಮೈಸೂರಿಗೆ ತೆರಳುತ್ತಿದ್ದೇವೆ, ಪಾದಯಾತ್ರೆ ಯಶಸ್ವಿಯಾಗಲಿ ಎಂದು ಶ್ರೀ ಕನಕ ದುರ್ಗಮ್ಮ ದೇವಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದೇವೆ, ಪಾದಯಾತ್ರೆಯಲ್ಲಿ ಭಾಗವಹಿಸಲು ದಿನದಿಂದ ದಿನಕ್ಕೆ ರಾಜ್ಯದ ನಾನಾ ಮೂಲೆಗಳಿಂದ ಜನರು ಹರಿದು ಬರುತ್ತಿದ್ದು, ಮತ್ತಷ್ಟು ಶಕ್ತಿ ಬಂದಂತಾಗಿದೆ ಎಂದರು.
ಈ ಸಂದರ್ಭದಲ್ಲಿ ಪ್ರಕೋಷ್ಟ ಸಂಚಾಲಕ ಎಚ್. ಶ್ರೀನಿವಾಸ್ ರೆಡ್ಡಿ, ಹಿರಿಯ ನಾಗರಿಕ ಪ್ರಕೋಷ್ಟದ ಸಂಚಾಲಕ ರಾಮಚಂದ್ರಯ್ಯ, ರೈತ ಮೋರ್ಚ ಉಪಾಧ್ಯಕ್ಷರಾದ ಶಿವರುದ್ರ ಗೌಡ, ಬಸವರಾಜ್ ಪಾಟೀಲ್, ಗ್ರಾಮೀಣ ಮಂಡಲದ ಅಧ್ಯಕ್ಷ ಹೊನ್ನಾರೆಡ್ಡಿ, ವೆಂಕಟೇಶ್ವ ರೆಡ್ಡಿ, ದಮ್ಮೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಜಾಹಿ ಪ್ರಕಾಶ್ ರೆಡ್ಡಿ, ಕೆ.ದಾಸರೆಡ್ಡಿ . ರಾಮನಗೌಡ, ಓಬಿಸಿ ಜಿಲ್ಲಾ ಉಪಾಧ್ಯಕ್ಷ ಶಿವು ಸೇರಿದಂತೆ ರೈತ ಮೋರ್ಚಾ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಇದ್ದರು.