ಟನಕನಕಲ್ : ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅನೀಮಿಯ ರಕ್ತ ತಪಾಸಣೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 4- ಪೋಷಣ ಮಾಸಾಚಾರಣೆ ಅಂಗವಾಗಿ ಟನಕನಕಲ್ ಗ್ರಾಮದ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಹದಿಹರೆಯದ ಹೆಣ್ಣು ಮಕ್ಕಳಿಗೆ ಅನೀಮಿಯ ರಕ್ತ ತಪಾಸಣೆ ಮಾಡಲಾಯಿತು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಶಿಶು ಅಭಿವೃದ್ಧಿ ಯೋಜನೆ ಹಾಗೂ ಕಿನ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ವಸತಿ ಶಾಲಾಯ ಡಾ ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮದಲ್ಲಿ ಕಿನ್ನಾಳ ಪಿ.ಎಚ್.ಸಿ ವೈದ್ಯಾಧಿಕಾರಿಗಳಾದ ಇರ್ಫಾನ ಅಂಜುಮ್, ಟನಕನಕಲ್ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ಶಾಲೆಯ ಪ್ರಾಚಾರ್ಯರಾದ ಮಂಜುನಾಥ, ಎ.ಸಿ.ಡಿ.ಪಿ.ಓ ಶಿವಶರಣಪ್ಪ ಗದ್ದಿ, ಬಿ.ಎಚ್.ಇ.ಒ ಗಂಗಮ್ಮ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಮೇಲ್ವಿಚಾರಕಿ ಮಲ್ಲಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿಗಳು ಮತ್ತು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
