
ವಿಕಲಚೇತನರ ರಾಜ್ಯ ಪ್ರಶಸ್ತಿಗೆ ಪ್ರಸ್ತಾವನೆ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 18- 2024-25ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಡಿಸೆಂಬರ್ ೦೩ರಂದು ವಿಶ್ವ ವಿಕಲಚೇತನರ ದಿನಾಚರಣೆಯ ನಡೆಯಲಿದೆ. ಈ ನಿಮಿತ್ತ ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ, ಸಲ್ಲಿಸಿರುವ ವೈಯಕ್ತಿಕ ವಿಭಾಗ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ, ಸಲ್ಲಿಸಿರುವ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಗಳನ್ನು ಇಲಾಖೆಯಿಂದ ಪಡೆದು ಈ ಹಿಂದೆ ವಿಕಲಚೇತನರ ಕ್ಷೇತ್ರದಲ್ಲಿ ರಾಜ್ಯ ಪ್ರಶಸ್ತಿ ಪಡೆಯದಿರುವ ಬಗ್ಗೆ ಸ್ವಯಂ ದೃಢೀಕರಣ ಪ್ರಮಾಣ ಪತ್ರ ಹಾಗೂ ಯಾವುದೇ ಪೊಲೀಸ್ ಪ್ರಕರಣಗಳು ಇಲ್ಲದಿರುವ ಬಗ್ಗೆ ದೃಢೀಕರಣದೊಂದಿಗೆ ದ್ವಿ-ಪ್ರತಿಗಳಲ್ಲಿ ಅಕ್ಟೋಬರ್ ೧೫ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ ೩೧,೩೨ ರಿಲಾಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆ ಹೊಸಪೇಟ್ ರಸ್ತೆ ಕೊಪ್ಪಳ ಕಚೇರಿಗೆ ಸಲ್ಲಿಸಲು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:೦೮೫೩೯-೨೯೫೪೯೬ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.