
ಸ್ವಚ್ಛತಾ ಹೀ ಸೇವಾ ದಿನಾಚರಣೆ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಿ : ಯು.ವೆಂಕೋಬ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 01- ಪ್ರತಿಯೊಬ್ಬರು ತಮ್ಮ ಮನೆ ಹಾಗೂ ಸುತ್ತಮುತ್ತ ಪ್ರದೇಶವನ್ನು ಸ್ವಚ್ಛವಾಗಿಟ್ಟು ಕೊಳ್ಳಬೇಕು ಪರಿಸರ ಸ್ವಚ್ಛವಾಗಿರಲು ಸಾಧ್ಯ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ತಾಲೂಕ ವಕೀಲರ ಸಂಘದ ಅಧ್ಯಕ್ಷ ಯು ವೆಂಕೋಬ ಅವರು ಹೇಳಿದರು.
ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ನಗರಸಭಾ ಸಹ ಭಾಗಿತ್ವದಲ್ಲಿ ಹಮ್ಮಿಕೊಂಡ ಸ್ವಚ್ಛತಾ ಹೀ ಸೇವಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು ಸ್ವಚ್ಛ ಭಾರತ್ ಮಿಷನ್ ಯೋಜನೆ ಯಡಿ ಜನಾಂದೋಲನ ಅಭಿಯಾನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯ ಅಂಗವಾಗಿ ಮಹಾತ್ಮರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್ ೨ನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತದೆ ಎಂದರು.
ಹಿರಿಯ ವಕೀಲರು ಎನ್ ಅಬ್ದುಲ್ ಸಾಹೇಬ್ ರಾರಾವಿ, ಮಲ್ಲಿಗೌಡ, ಹೇಮಲತಾ, ಸರೋಜಾ, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ರಂಗಸ್ವಾಮಿ, ಸ್ವರ್ಣಲತಾ, ರಾಷ್ಟ್ರೀಯ ಸಾಕ್ಷರತಾ ಸದಸ್ಯ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ, ನ್ಯಾಯಾಲಯದ ಸಿಬ್ಬಂದಿ ನಗರಸಭೆ ಸಿಬ್ಬಂದಿಯವರು ಇದ್ದರು.