ಅ.26ರಂದು ಪುಣ್ಯಸ್ಮರಣೆಯ ದಶಮಾನೋತ್ಸವ ಕಾರ್ಯಕ್ರಮ.

ಕುಷ್ಟಗಿ: ತಾಲೂಕಿನ ಚಳಗೇರಾ ಗ್ರಾಮದಲ್ಲಿ ಅ.26 ರಂದು ರಂಭಾಪುರಿ ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ಚಳಗೇರಾ ಶ್ರೀಮಠದ ಲಿಂ,ವಿರುಪಾಕ್ಷಲಿಂಗ ಶಿವಾಚಾರ್ಯರ ಪುಣ್ಯಸ್ಮರಣೆಯ ದಶಮಾನೋತ್ಸವ ಕಾರ್ಯಕ್ರಮ ಹಾಗೂ ಧರ್ಮಸಭೆ ನಡೆಯುತ್ತದೆ ಭಕ್ತಾಧಿಗಳು ಹಾಗೂ ಸಾರ್ವಜನಿಕರು ಆಗಮಿಸಬೇಕು ಎಂದು ಚಳಗೇರಾ ಹಿರೇಮಠದ ವೀರಸಂಗಮೇಶ್ವರ ಶಿವಾಚಾರ್ಯರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು ಶ್ರೀಗಳ ಪುಣ್ಯಸ್ಮರಣೆಯ ದಶಮಾನೋತ್ಸವದ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ ರುದ್ರಮುನಿ ಹಾಗೂ ವಿರೂಪಾಕ್ಷಲಿಂಗ ಶಿವಾಚಾರ್ಯರ, ವೀರಭದ್ರೇಶ್ವರ ಹಾಗೂ ಭದ್ರಕಾಳಿ ಮೂರ್ತಿಗಳಿಗೆ ರುದ್ರಾಭಿಷೇಕ, ಮಹಾ ಮಂಗಳಾರತಿ, ಬಿಲ್ವಾರ್ಚನೆ, ಅಯ್ಯಚಾರ, ಲಿಂಗದೀಕ್ಷೆ, ಕಾರ್ಯಕ್ರಮಗಳು ನಡೆಯುತ್ತವೆ.
ಗ್ರಾಮದ ಮಹಿಳೆಯರು ಕುಂಭ ಕಳಶಗಳನ್ನು ಹೊತ್ತು ಸಕಲ ವಾಧ್ಯಮೇಳಗಳು ಹಾಗೂ ಡೊಳ್ಳು ಭಾಜಾ ಭಜಂತ್ರಿಗಳೊಂದಿಗೆ ಅಡ್ಡಪಲ್ಲಕ್ಕಿಯ ಮಹೋತ್ಸವವನ್ನು ಗ್ರಾಮದಲ್ಲಿನ ಪ್ರಮುಖ ರಾಜಬೀದಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ ಮಠಕ್ಕೆ ತಲುಪಿಸುತ್ತಾರೆ.
ನಂತರ ಮಠದ ಆವರಣದಲ್ಲಿ ಧರ್ಮಸಭೆ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಅನೇಕ ಪರಮ ಪೂಜ್ಯರು, ಮಠಾಧೀಶರು ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ, ಕೊಪ್ಪಳ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ, ಶಾಸಕ ದೊಡ್ಡನಗೌಡ ಪಾಟೀಲ ಸೇರಿದಂತೆ ವಿವಿಧ ಶಾಸಕರು ಹಾಗೂ ಮಾಜಿ ಸಚಿವರು, ಮಾಜಿ ಶಾಸಕರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಮಹಾ ಪ್ರಸಾದ ಕಾರ್ಯಕ್ರಮ, ಸಾಯಂಕಾಲ 5 ಗಂಟೆಗೆ ಲಘು ರಥೋತ್ಸವ ನಡೆಯಲಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!