
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೂತನ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿಗೆ ಅಭಿನಂದನೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 8- ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೂತನ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಅವರಿಗೆ ಬಳ್ಳಾರಿ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ ಅಸೋಸಿಯೇಷನ್ ಸನ್ಮಾನಿಸಿ, ಅಭಿನಂದಿಸಿ, ಶುಭ ಹಾರೈಸಿದ್ದಾರೆ.
ಬಳ್ಳಾರಿ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ ಅಸೋಸಿಯೇಷನ್ ಅಧ್ಯಕ್ಷ ವಿ. ರಾಮಚಂದ್ರ ಹಾಗೂ ಕಾರ್ಯದರ್ಶಿ ವಾಸುದೇವ್ ಆಚಾರ್ ಅವರು, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗೆ ಯುವ ಮಂದಾಳತ್ವ ಸಿಕ್ಕಿದೆ. ಈ ಅವಧಿಯಲ್ಲಿ ಸಂಸ್ಥೆಯು ಸರ್ವಾಂಗೀಣ ಅಭಿವೃದ್ಧಿಯನ್ನು ಸಾಧಿಸಲಿ ಎಂದು ಶುಭ ಹಾರೈಸಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ಕಾರ್ಯಕಾರಿ ಸಮಿತಿ ಸದಸ್ಯ ಟಿ.ಶ್ರೀನಿವಾಸರಾವ್, ಬಳ್ಳಾರಿ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ ಅಸೋಸಿಯೇಷನ್ನ ವೆಂಕಟೇಶ್, ನಿರ್ಮಾಪೇಂಟ್ಸ್ನ ನಾಗರಾಜ್, ಸುಧಾಕರ ಪೈಪ್ಸ್ನ ಅನಂತಲ ಸುಧಾಕರ, ನಾಗಪ್ಪ ಪಾಟೀಲ್, ಪವನ್ ಕುಮಾರ್ ರೆಡ್ಡಿ, ಮಲ್ಲಿಕಾರ್ಜುನ ರೆಡ್ಡಿ, ಸಾಯಿ ಗಣೇಶ್ ಬಸವ, ಅನಿಲ್ ಕುಮಾರ್, ಶ್ರೀಧರ್ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.