1

ವಿಜಯಪುರ ಜಿಲ್ಲೆಯ ಜೆಡಿಎಸ್ ಉಸ್ತುವಾರಿಯಾಗಿ ಸಿವಿಸಿ ನೇಮಕ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 19- ವಿಜಯಪುರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ತಳಮಟ್ಟದಿಂದ ಪರಿಣಾಮಕಾರಿಯಾಗಿ ಸಂಘಟಿಸಲು ಪಕ್ಷದ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ್ ಅವರನ್ನು ಆ ಜಿಲ್ಲೆಯ ಉಸ್ತುವಾರಿಗಳನ್ನಾಗಿ ನೇಮಕಗೊಳಿಸಿ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ.

ಪಕ್ಷವನ್ನು ರಾಜ್ಯಮಟ್ಟದಲ್ಲಿ ಪರಿಣಾಮಕಾರಿಯಾಗಿ ಸಂಘಟಿಸಲು, ವಿಧಾನಸಭಾ ಕ್ಷೇತ್ರವಾರು ಸದಸ್ಯತ್ವ ನೋಂದಣಿ ಅಭಿಯಾನವನ್ನು ಅಕ್ಟೋಬರ್ ೨೦೨೪ರ ಒಳಗಾಗಿ ಪೂರ್ಣಗೊಳಿಸಬೇಕಾಗಿರುತ್ತದೆ. ಜಿಲ್ಲಾ ಸಮಿತಿ, ತಾಲೂಕು ಸಮಿತಿ, ಬೂತ್ ಸಮಿತಿ ಹಾಗೂ ವಿವಿಧ ಘಟಕಗಳನ್ನು ರಚಿಸಿ ಸ್ಥಳೀಯ ಮಟ್ಟದಲ್ಲಿ ಪಕ್ಷವನ್ನು ರಚನಾತ್ಮಕವಾಗಿ ಬಲ ಪಡಿಸಬೇಕಾಗಿರುತ್ತದೆ.

ಈ ಪ್ರಕ್ರಿಯೆಗಾಗಿ ಸಿ.ವಿ.ಚಂದ್ರಶೇಖರ್ ಅವರನ್ನು ವಿಜಯಪುರ ಜಿಲ್ಲೆಯ ಉಸ್ತುವಾರಿಗಳನ್ನಾಗಿ ನೇಮಕಗೊಳಿಸಲಾಗಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರೂ ಆದ ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಪಕ್ಷ ನನ್ನ ಮೇಲೆ ಭರವಸೆ ಇಟ್ಟು ದೊಡ್ಡ ಜವಾಬ್ದಾರಿಯನ್ನು ನೀಡಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹಾಗೂ ಎಲ್ಲರೊಡನೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಇಡೀ ವಿಜಯಪುರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಅತ್ಯಂತ ಪ್ರಬಲ ಪಕ್ಷವನ್ನಾಗಿಸಲು ಹಗಲಿರುಳು ಶ್ರಮಿಸುತ್ತೇನೆ. ಈ ನಿಟ್ಟಿನಲ್ಲಿ ಈಗಾಗಲೇ ಕ್ರಿಯಾ ಯೋಜನೆಯೊಂದನ್ನು ಸಿದ್ಧಪಡಿಸಿಕೊಂಡಿರುವೆ. ಈ ಜವಾಬ್ದಾರಿ ನೀಡಿದ ಪಕ್ಷದ ನಾಯಕರಿಗೆ ನಾನು ಅಭಾರಿಯಾಗಿದ್ದೇನೆ, ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಿ.ವಿ.ಚಂದ್ರಶೇಖರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!