9

ಕುಡಿಯುವ ನೀರು ಪೂರೈಸಲು ಸಮನ್ವಯತೆಯಿಂದ ಅಧಿಕಾರಿಗಳ ಕಾರ್ಯವಾಗಬೇಕು : ಡಿಸಿ ದಿವಾಕರ್

ಕರುನಾಡ ಬೆಳಗು ಸುದ್ದಿ

ವಿಜಯನಗರ, 8- ಅಮೃತ್ ೨.೦ ಯೋಜನೆಯಡಿಯಲ್ಲಿ ಮರಿಯಮ್ಮನಹಳ್ಳಿ, ಕಮಲಾಪುರ, ಸೇರಿ ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಹೂವಿನಹಡಗಲಿ ತಾಲೂಕುಗಳಿಗೆ ಕುಡಿಯುವ ನೀರು ಪೂರೈಕೆಗೆ ಬಾಕಿ ಇರುವ ಕಾಮಗಾರಿಯನ್ನು ತಿಂಗಳೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಅಮೃತ್ ೨.೦ ಯೋಜನೆಯ ಜಿಲ್ಲಾ ಮಟ್ಟದ ಅಧಿಕಾರಿಗಳ ಮೇಲ್ವಿಚಾರಣೆ ಸಭೆಯ ಅಧ್ಯಕ್ಷತೆ ವಹಿಸಿ ಶುಕ್ರವಾರ ಮಾತನಾಡಿದರು. ಅಮೃತ್ ಯೋಜನೆಗೆ ಸಂಬAಧಿಸಿದAತೆ ತಾಂತ್ರಿಕ ಸಮಸ್ಯೆಗಳು, ರಸ್ತೆ ಬದಿ ಪೈಪ್‌ಲೈನ್ ವ್ಯವಸ್ಥೆ, ಜಾಗದ ಕೊರತೆಗಳಿದ್ದರೇ ಶೀಘ್ರವೇ ಇತ್ಯರ್ಥಗೊಳಿಸಿ ಜನರಿಗೆ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದರು.

ನೈರ್ಮಲ್ಯ, ಕುಡಿಯುವ ನೀರು ಸೇರಿದಂತೆ ಚರಂಡಿ ವ್ಯವಸ್ಥೆಗೆ ಮೊದಲ ಆದ್ಯತೆ ನೀಡಬೇಕು. ಮರಿಯಮ್ಮನಹಳ್ಳಿಯಲ್ಲಿ ಮುಂಬರುವ ರಥೋತ್ಸವಕ್ಕೆ ಹೆಚ್ಚಿನ ಜನಸಂಖ್ಯೆ ಸೇರಲಿದ್ದಾರೆ. ಅಷ್ಟರೊಳಗೆ ಕುಡಿಯುವ ನೀರಿನ ಯೋಜನೆ ಪೂರ್ಣಗೊಳಿಸಲು ಅಧಿಕಾರಿಗಳು ಕಾರ್ಯನ್ಮೋಖರಾಗಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಕೆಲಸದಲ್ಲಿ ನಿರಾಸಕ್ತಿ ವಹಿಸಿದರೇ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ.

ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ನಿಗಧಿತ ಸ್ಥಳದಲ್ಲಿ ಶೌಚಾಲಯ ನಿರ್ಮಾಣಕ್ಕೆ ಅನುದಾನ ನೀಡಿದ್ದರೂ, ನಿರ್ಮಾಣ ಕಾಮಗಾರಿಗಳಿಗೆ ಅಧಿಕಾರಿಗಳು ವಿಳಂಬ ಮಾಡುತ್ತಿರುವುದು ಸರಿಯಲ್ಲ. ಇನ್ನು ಹದಿನೈದು ದಿನದೊಳಗೆ ಶೌಚಾಲಯಗಳ ಕಾಮಗಾರಿ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. ಮೂಲಭೂತ ಸಮಸ್ಯೆಗಳಿಗೆ ಅಧಿಕಾರಿಗಳು ನಿರಾಸಕ್ತಿ ವಹಿಸಿದರೇ ಶೋಕಾಸ್ ನೊಟೀಸ್ ನೀಡಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹೊಸಪೇಟೆ ಸಹಾಯಕ ಆಯುಕ್ತರಾದ ಪಿ.ವಿವೇಕಾನಂದ, ಹರಪನಹಳ್ಳಿ ಸಹಾಯಕ ಆಯುಕ್ತರಾದ ಚಿದಾನಂದ ಗುರುಸ್ವಾಮಿ, ನಗರಸಭೆ ಪೌರಾಯುಕ್ತ ಚಂದ್ರಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮನೋಹರ್, ನಗರನೀರು ಸರಬರಾಜು ಇಲಾಖೆ ಎಇಇ ಮಲ್ಲಿಕಾರ್ಜುನ ಪಾಟೀಲ್ ಸೇರಿದಂತೆ ಯೋಜನಾ ನಿರ್ದೇಶಕರು ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರ, ಪುರಸಭೆಯ ಮುಖ್ಯಾಧಿಕಾರಿಗಳು, ಜೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರರು, ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!