3

ಯವಕರಿಗೆ ಮತದಾನದ ಜಾಗೃತಿಗಾಗಿ ಯೋಜನೆ ರೂಪಿಸಲಾಗಿದೆ : ಡಿಸಿ ದಿವಾಕರ

ಕರುನಾಡ ಬೆಳಗು ಸುದ್ದಿ

ವಿಜಯನಗರ, 29- ಯುವಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಈಗಾಗಲೇ ಯೋಜನೆಗಳನ್ನು ರೂಪಿಸಲಾಗಿದ್ದು, ಅವುಗಳನ್ನು ಕಾರ್ಯಗತಗೊಳಿಸಲಾಗುದು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊAದಿಗೆ ನಡೆಸಿದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದಾಗಿ ತೆರವಾಗಿದ್ದ, ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿದೆ. ಜಿಲ್ಲೆಯಲ್ಲಿ ಒಟ್ಟು ೧೭ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲ್ಲಿದ್ದು, ಚುನಾವಣೆಯ ಬಗ್ಗೆ ಯುವಕರಲ್ಲಿ ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ. ಜಿಲ್ಲೆಯ ಎಲ್ಲ ಪದವಿ ಮತ್ತು ಪಿಯುಸಿ ಕಾಲೇಜುಗಳಲ್ಲಿ ಮತದಾನ ಜಾಗೃತಿಯ ಬ್ಯಾನರ್‌ಗಳನ್ನು ಅಳವಡಿಸುವುದು ಹಾಗೂ ವಿವಿಧ ಕಾರ್ಯಕ್ರಮ ಆಯೋಜಿಸಲು ಯೋಜನೆ ರೂಪಿಸಲಾಗಿದ್ದು, ರಾಜಕೀಯ ಪಕ್ಷಗಳು ಸಹ ಇದಕ್ಕೆ ಸಹಕರಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ೧೭.೨೭ ಲಕ್ಷ ಜನಸಂಖ್ಯೆ ಇದ್ದು, ಅದರಲ್ಲಿ ೧೧.೩೬ ಲಕ್ಷ ಮತದಾರರಿದ್ದಾರೆ. ಮತದಾರರ ಪ್ರಮಾಣ ಏರಿಕೆಯಾಗಿಲ್ಲ, ಇದಕ್ಕೆ ಕಾರಣ ತಿಳಿಯಲು ಸರಿಯಾದ ಸಮೀಕ್ಷೆ ಕೈಗೊಂಡು ಎಲ್ಲಾ ಮತದಾರರ ನೊಂದಣಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಲೋಕಸಭೆ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಆದಾಗಿನಿಂದ, ಕರಡು ಮತದಾರರ ಪಟ್ಟಿ ಪ್ರಕಟವಾಗುವ ವರೆಗೆ ೫ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ೮,೯೭೬ ಮತದಾರರು ಹೊಸದಾಗಿ ನೊಂದಣಿ ಮಾಡಿರುತ್ತಾರೆ. ಕರಡು ಮತದಾರರ ಪಟ್ಟಿ ಪ್ರಕಟಣೆಯ ನಂತರವು ಸಹ ಮತದಾರರ ನೊಂದಣಿಗೆ ಅವಕಾಶವಿರುತ್ತದೆ. ಇದರ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಕೈಗೊಳ್ಳಲು ಸೂಚಿಸಿದರು.

ಕರಡು ಮತದಾರರ ಪಟ್ಟಿ ವಿತರಣೆ: ಇದೇ ವೇಳೆ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದ ರಾಜಕೀಯ ಪಕ್ಷದ ಮುಖಂಡರಿಗೆ ಕರಡು ಮತದಾರರ ಪಟ್ಟಿಯನ್ನು ವಿತರಣೆ ಮಾಡಿದರು.

ಈ ಸಭೆಯಲ್ಲಿ ಚುನವಾಣೆ ವಿಭಾಗದ ಶಿರಸ್ತೆದಾರರಾದ ಮನೋಜ್ ಲಾಳೆ ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ಕೊಟ್ರೇಶ್, ಮಧುಸುದನ್ ಕುಲಕರ್ಣಿ ಹಾಗೂ ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!