
ಮೀನುಗಾರಿಕೆ ಇಲಾಖೆ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 23- 2024-25ನೇ ಸಾಲಿನ ಮೀನುಗಾರಿಕೆ ಇಲಾಖೆಯ ಜಿಲ್ಲಾ ವಲಯ, ರಾಜ್ಯ ವಲಯ ಹಾಗೂ ಕೇಂದ್ರ ವಲಯದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಒಳನಡು ಮೀನುಗಾರರು/ಮೀನು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ವಲಯ, ರಾಜ್ಯ ವಲಯ ಹಾಗೂ ಕೇಂದ್ರ ವಲಯದ ಯೋಜನೆಗಳಾದ ಕಿಟ್ಟುಗಳ ಖರೀದಿಗೆ ಸಹಾಯಧನ, ಮೀನುಮರಿ ಖರೀದಿಗೆ ಸಹಾಯಧನ, ಕೆರೆಯ ಅಂಚಿನಲ್ಲಿ ಮೀನುಮರಿ ಪಾಲನಾ ಕೊಳ ನಿರ್ಮಾಣಕ್ಕೆ ಸಹಾಯಧನ, ಪ್ರಧಾನಮಂತ್ರಿ ಮತ್ಸö್ಯ ಸಂಪದ ಯೋಜನೆ(ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗ), ಮೀನುಕೊಳ ನಿರ್ಮಾಣಕ್ಕೆ ಸಹಾಯಧನ(ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗ) ಮತ್ತು ಮತ್ಸö್ಯ ವಾಹಿನಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೊಪ್ಪಳ ಹಾಗೂ ಯಲಬುರ್ಗಾ ತಾಲ್ಲೂಕುಗಳ ನೋಂದಾಯಿತ ಮೀನುಗಾರಿಕೆ ಸಹಕಾರಿ ಸಂಘಗಳಲ್ಲಿನ ಮೀನುಗಾರರಿಗೆ ಮೊದಲ ಆದ್ಯತೆಯ ಷರತ್ತಿಗೊಳಪಟ್ಟು ಅರ್ಜಿ ಆಹ್ವಾನಿಸಿದ್ದು, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನವಾಗಿದ್ದು, ಆಸಕ್ತರು ಕಚೇರಿ ವೇಳೆಯಲ್ಲಿ ಕಚೇರಿಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.