
ತುಮ್ಮರಗುದ್ದಿ : ವಿದ್ಯಾರ್ಥಿಗಳಿಗೆ ಶೂ ಸಾಕ್ಸ್ ವಿತರಣೆ
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ, 2- ತಾಲೂಕಿನ ತುಮ್ಮರಗುದ್ದಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಶೂ, ಸಾಕ್ಸ್ಗಳನ್ನು ವಿತರಿಸಲಾಯಿತು.
ತಾಲೂಕು ಪಂಚಾಯಿತಿ ಸದಸ್ಯ ಶರಣಪ್ಪ ಈಳಿಗೇರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ಸರಕಾರ ಬಿಸಿಯೂಟ, ಸಮವಸ್ತç ಸೇರಿದಂತೆ ಕಲಿಕೆಯಲ್ಲಿ ತೊಂದರೆಯಾಗದಂತೆ ಮಕ್ಕಳಿಗೆ ಈಗಾಗಲೇ ಶೂ, ಸಾಕ್ಸ್ ಯೋಜನೆಯನ್ನು ನೀಡಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಗಳು ಸರಿಯಾಗಿ ಪಡೆದುಕೊಳ್ಳಲು ಮುಂದಾಗಬೇಕು. ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ತಪ್ಪದೇ ಕಳುಹಿಸಬೇಕು ಎಂದು ತಿಳಿಸಿದರು.
ಈ ವೇಳೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕ ಹುಚ್ಚೀರಪ್ಪ ಬೆಟಗೇರಿ, ಎಸ್‌ಡಿಎಂಸಿ ಅಧ್ಯಕ್ಷ ಚಂದಾಲಿAಗಪ್ಪ ಹಿರೇಮನಿ ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಇನ್ನಿತರರು ಇದ್ದರು.