6

ಸಂಡೂರು ವಿಧಾನಸಭೆ ಉಪಚುನಾವಣೆ-2024
ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಸಜ್ಜು : ಪ್ರಶಾಂತ್ ಕುಮಾರ್ ಮಿಶ್ರಾ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 8- ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.೧೩ ರಂದು ಮತದಾನ ಜರುಗಲಿದ್ದು, ನ.೧೧ ರ ಸಂಜೆ ೦೬ ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ೨,೩೬,೧೦೦ ಮತದಾರರು ಇದ್ದು, ೨೫೩ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನದ ಕಾರ್ಯಕ್ಕೆ ಸಂಡೂರು ಕ್ಷೇತ್ರದಲ್ಲಿ ೧,೨೧೫ ಅಧಿಕಾರಿ ಹಾಗೂ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಂ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಸಂಡೂರು ವಿಧಾನಸಭೆ ಉಪಚುನಾವಣೆ ನಿಮಿತ್ಯ ನ.೧೩ ರಂದು ಬೆಳಿಗ್ಗೆ ೦೭ ಗಂಟೆಯಿ0ದ ಸಂಜೆ ೦೬ ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನ ಅಂತ್ಯದ ೪೮ ಗಂಟೆಗೂ ಮುನ್ನ ಅಂದರೆ ನ.೧೧ ರ ಸಂಜೆ ೦೬ ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಈ ಸಂದರ್ಭದಲ್ಲಿ ವಾಹನಗಳ ಮೂಲಕ ಬಹಿರಂಗ ಪ್ರಚಾರ, ಧ್ವನಿವರ್ಧಕ ಬಳಕೆಗೆ ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳು ಮನೆ-ಮನೆ ಭೇಟಿ ಮೂಲಕ ಮತಯಾಚನೆ ಮಾಡಬಹುದು. ನ.೧೧ ರ ಸಂಜೆ ೦೬ ರಿಂದ ನ.೧೪ ಸಂಜೆ ೦೬ ಗಂಟೆಯವರೆಗೆ ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ೨೦೨೩ ರ ಕಲಂ ೧೬೩ ಅಡಿ ಪ್ರತಿಬಂಧಕಾಜ್ಞೆ ಜಾರಿಯಾಗಲಿದ್ದು, ೦೫ ಕ್ಕಿಂತ ಹೆಚ್ಚು ಜನರು ಒಟ್ಟಾಗಿ ಓಡಾಡುವಂತಿಲ್ಲ. ಕಾನೂನು ಸುವ್ಯವಸ್ಥೆ ಪಾಲನೆಗಾಗಿ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರ ಬಿಡಲು ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಂಡೂರು ಕ್ಷೇತ್ರದಲ್ಲಿ ಹಾಗೂ ಈ ಕ್ಷೇತ್ರಕ್ಕೆ ಹೊಂದಿಕೊ0ಡ ಕಂಪ್ಲಿ, ಕುರುಗೋಡು ಮತ್ತು ಬಳ್ಳಾರಿ ತಾಲ್ಲೂಕಗಳ ೦೫ ಕಿ.ಮೀ ವ್ಯಾಪ್ತಿಯಲ್ಲಿ ನ.೧೧ ರ ಸಂಜೆ ೦೬ ಗಂಟೆಯಿ0ದ ನ.೧೪ ರ ಬೆಳಿಗ್ಗೆ ೦೬ ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಡ್ರೆöÊ ಡೇ ಆಚರಿಸಲು ಸೂಚಿಸಿದ್ದಾರೆ.

ಪಾರದರ್ಶಕ ಚುನಾವಣೆಗೆ ಎಲ್ಲಾ ಹಂತದಲ್ಲಿ ಇವಿಎಂ ಮತಯಂತ್ರಗಳನ್ನು ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಗೊಂದಲವಾಗದ0ತೆ ಅಗತ್ಯ ಕ್ರಮ ವಹಿಸಲಾಗಿದೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಸಮ್ಮುಖದಲ್ಲಿ ರ‍್ಯಾಂಡಮೈಜೇಶನ್ ಮಾಡಿ, ಎಲ್ಲ ಪ್ರಕ್ರಿಯೆಗಳನ್ನು ಅವರ ಗಮನಕ್ಕೆ ತರಲಾಗಿದೆ ಎಂದು ಡಿಸಿ ಮಿಶ್ರಾ ಅವರು ತಿಳಿಸಿದ್ದಾರೆ.

ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ೨,೩೬,೧೦೦ ಮತದಾರರು, ೨೫೩ ಮತಗಟ್ಟೆ : ಸಂಡೂರು ವಿಧಾನಸಭೆ ವ್ಯಾಪ್ತಿಯಲ್ಲಿ ಒಟ್ಟು ೨,೩೬,೧೦೦ ಮತದಾರರಿದ್ದಾರೆ. ೧,೧೭,೭೮೯ ಪುರುಷ ಮತದಾರರು, ೧,೧೮,೨೮೨ ಮಹಿಳೆ ಮತದಾರರು ಹಾಗೂ ೨೯ ಅಲ್ಪಸಂಖ್ಯಾತ ಲಿಂಗತ್ವ ಮತದಾರರು ಇದ್ದಾರೆ. ಒಟ್ಟು ೨೫೩ ಮತಗಟ್ಟೆ ಮತಕೇಂದ್ರಗಳಿವೆ.

ಮತಗಟ್ಟೆಗಳಿಗೆ ೧,೨೧೫ ಸಿಬ್ಬಂದಿ ನೇಮಕ : ಸಂಡೂರು ವಿಧಾನಸಭೆ ಉಪಚುನಾವಣೆ ಅಂಗವಾಗಿ ಶಾಂತಿಯುತ ಹಾಗೂ ಚುನಾವಣಾ ಆಯೋಗದ ನಿಯಮಾನುಸಾರ ಮತದಾನ ಜರುಗಿಸಲು ಅಗತ್ಯ ಕ್ರಮ ವಹಿಸಲಾಗಿದೆ.

ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲು ೩೦೪ ಮತಗಟ್ಟೆ ಅಧಿಕಾರಿಗಳು, ೩೦೪ ಸಹಾಯಕ ಅಧಿಕಾರಿಗಳು, ೬೦೮ ಮತದಾನ ಸಹಾಯಕ ಸಿಬ್ಬಂದಿ ಸೇರಿ ಒಟ್ಟು ೧,೨೧೫ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸೂಕ್ಷö್ಮ ಮತ್ತು ಅತಿ ಸೂಕ್ಷö್ಮ ಮತಗಟ್ಟೆಗಳಿಗೆ ಹೆಚ್ಚುವರಿಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಪ್ರತಿ ಮತಗಟ್ಟೆಗಳಿಗೆ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!