
ಹೆಸರು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳ ಪ್ರಾರಂಭ : ಜಿಲ್ಲಾಧಿಕಾರಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 26- ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಹೆಸರು ಖರೀದಿಗೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ೧೨ ಕೇಂದ್ರಗಳನ್ನು ಆರಂಭಿಸಲು ಜಿಲ್ಲಾ ಕಾರ್ಯಪಡೆ ಸಮಿತಿ ರಚಿಸಲಾಗಿದೆ.
ಸರ್ಕಾರದ ಸೂಚನೆಯಂತೆ ಕೊಪ್ಪಳದಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನಿಸಲಾಗಿದೆ.
ಜಿಲ್ಲೆಯ ಕುಕನೂರು, ಯಲಬುರ್ಗಾ, ಬನ್ನಿಕೊಪ್ಪ, ಚಿಕೇನಕೊಪ್ಪ, ತೊಂಡಿಹಾಳ, ಮುಧೋಳ, ಮಂಡಲಗೇರಿ, ತಾವರಗೇರಾ, ಹನುಮಸಾಗರ, ಹಿರೇಸಿಂಧೋಗಿ, ಮುದ್ದಾಬಳ್ಳಿ ಮತ್ತು ಕವಲೂರು ಗ್ರಾಮಗಳಲ್ಲಿ ಕೇಂದ್ರಗಳನ್ನು ಆರಂಭಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ರೈತರು ಇದರ ಸದುಪಯೋಗ ಪಡೆದು ಕೊಳ್ಳಬೇಕು, ಕೇಂದ್ರಗಳ ಮೂಲಕ ರೈತರಿಗೆ ಸಮರ್ಪಕವಾಗಿ ಯೋಜನೆಯ ಲಾಭ ಲಭಿಸಲು ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿದು ಬಂದಿದೆ.
2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ನೀಡಿದೆ. ಜಿಲ್ಲೆಯಲ್ಲಿ ಹೆಸರು ಕಾಳು ಖರೀದಿಸಲು ನಾಫೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಸಂಸ್ಥೆಯನ್ನಾಗಿ, ರಾಜ್ಯ ಸಹಕಾರ ಮಾರಾಟ ಮಂಡಳವು ರಾಜ್ಯದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿದೆ.
ರೈತರು ಪ್ರತಿ ಎಕರೆಗೆ ಗರಿಷ್ಠ ಎರಡು ಕ್ವಿಂಟಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 10 ಕ್ವಿಂಟಲ್ ಖರೀದಿ ಪ್ರಮಾಣ ನಿಗದಿಪಡಿಸಲಾಗಿದೆ. ಎಫ್‌ಎಕ್ಯೂ ಗುಣಮಟ್ಟದ ಹೆಸರುಕಾಳು ಖರೀದಿಸಲಾಗುತ್ತದೆ.
ಎನ್‌ಐಸಿ ಸಂಸ್ಥೆ ಬೆಂಬಲ ಬೆಲೆ ಯೋಜನೆಯಡಿ ಭತ್ತ ಹಾಗೂ ರಾಗಿ ಫಸಲಿನ ಉತ್ಪನ್ನ ಖರೀದಿಸಲು ಸಿದ್ಧಪಡಿಸಿರುವ ತಂತ್ರಾAಶವನ್ನೇ ಹೆಸರುಕಾಳು ಉತ್ಪನ್ನ ಖರೀದಿಸಲು ಬಳಕೆ ಮಾಡಲಾಗುತ್ತದೆ. ಎನ್‌ಐಸಿ ಸಂಸ್ಥೆ ಅಭಿವೃದ್ಧಿಪಡಿಸಿರುವ ಈ ತಂತ್ರಾAಶವನ್ನು ಈಗಾಗಲೇ ಕೃಷಿ ಇಲಾಖೆ ಫ್ರೂಟ್ಸ್ ಜೊತೆ ಸಂಯೋಜನೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.