KB

ನ. 1 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಕರುನಾಡ ಬೆಳಗು ಸುದ್ದಿ

ವಿಜಯನಗರ, 29- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ನವಂಬರ್ ೧ ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.

ಅಕ್ಟೊಬರ್ 31 ರಂದು ಶಿಗ್ಗಾವಿಯಿಂದ ರಾತ್ರಿ ೭.೩೦ಕ್ಕೆ ಹೊಸಪೇಟೆಗೆ ಆಗಮಿಸಿ ವೈಕುಂಠ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡುವರು. ನವಂಬರ್ ೧ ರಂದು ಬೆಳಗ್ಗೆ ೮.೪೫ಕ್ಕೆ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ೬೯ ನೇ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ ೫.೩೦ಕ್ಕೆ ಹೊಸಪೇಟೆಯ ಹೇರಾ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ಮಸ್ಜಿದ್-ಎ-ತೈಯಬ ಅಡಳಿತ ಮಂಡಳಿ ವತಿಯಿಂದ ಆಯೋಜಿಸಲಾದ ಬಹುಮಾನ ವಿತರಣಾ ಸಮಾರಂಭದಲ್ಲಿ ಭಾವಹಿಸುವರು. ಬಳಿಕ ವೈಕುಂಠ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡುವರು.

Leave a Reply

Your email address will not be published. Required fields are marked *

error: Content is protected !!