
26ರಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪ್ರವಾಸ
ಕರುನಾಡ ಬೆಳಗು ಸುದ್ದಿ
ವಿಜಯನಗರ, 24- ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್‌ರಾಜ್ ಸಿಂಗ್ ಅವರು ಸೆಪ್ಟಂಬರ್ ೨೬ ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ 11:30ಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ ೩ ಗಂಟೆಗೆ ಜಿಲ್ಲೆಯ ವಿವಿಧೆಡೆ ಸ್ಥಳ ಪರಿವೀಕ್ಷಣೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.