
ಡಿ. 04 ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ, ಮರೆತುಹೋದ ಖಾದ್ಯಗಳ ಪಾಕಸ್ಪರ್ಧೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 22- ಕೃಷಿ ಇಲಾಖೆ ಮತ್ತು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರವತಿಯಿAದ ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ ೨೦೨೫ರ ಅಂಗವಾಗಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಡಿಸೆಂಬರ್ ೦೪ರಂದು ಬೆಳಿಗ್ಗೆ ೧೦ ಗಂಟೆಗೆ ಕೊಪ್ಪಳ ತಾಲೂಕು ಪಂಚಾಯತ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಹೊರತುಪಡಿಸಿ ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿದ್ದು, ಪ್ರತಿ ಸ್ಪರ್ಧಿಗೆ ಒಂದೇ ತಿನಿಸು ಅಥವಾ ಅಡುಗೆ ಸಿಹಿ, ಖಾರ ಹಾಗೂ ಮರೆತುಹೋದ ಖಾದ್ಯಗಳ ತಿನಿಸು ಮಾಡಲು ಅವಕಾಶವಿರುತ್ತದೆ. ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯದ ಸಸ್ಯಾಹಾರಿ ತಿನಿಸುಗಳಿಗೆ ಮಾತ್ರ ಅವಕಾಶವಿರುತ್ತದೆ. ೨೦೨೩-೨೪ನೇ ಸಾಲಿನಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟದಲ್ಲಿ ಮೊದನೇ, ದ್ವಿತೀಯ ಮತ್ತು ತೃತೀಯ ಬಹುಮಾನ ಪಡೆದ ಸ್ಪರ್ಧಿಗಳಿಗೆ ಪ್ರಸ್ತುತ ವರ್ಷದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಮನೆಯಲ್ಲಿಯೇ ತಯಾರಿಸಿದ ಸಿರಿಧಾನ್ಯ, ಮರೆತುಹೋದ ಖಾದ್ಯದ ತಿನಿಸು (ಅಡುಗೆ) ಪ್ರದರ್ಶಿಸಲು ಮಾತ್ರ ಅವಕಾಶವಿರುತ್ತದೆ. ತಯಾರಿಸಿದ ತಿನಿಸುಗಳ ಪ್ರದರ್ಶನ, ತಯಾರಿಕೆಗೆ ಬಳಸಿದ ಪದಾರ್ಥಗಳು, ತೋರಿಕೆ, ರುಚಿ, ಸುವಾಸನೆಗಳ ಮೇಲೆ ಅಂತಿಮ ನಿರ್ದಾರ ಕೈಗೊಳ್ಳಲಾಗುವುದು.
ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಒಂದು ಸಿಹಿ, ಖಾರ (ಸಿರಿಧಾನ್ಯ ಖಾದ್ಯಗಳಿಗೆ ಮಾತ್ರ) ಮತ್ತು ಮರೆತುಹೋದ ಖಾದ್ಯದ ತಿನಿಸನ್ನು ಆಯ್ಕೆಮಾಡುವುದು ಆಯ್ಕೆ ಮಾಡಿದಂತಹ ವಿಜೇತರಿಗೆ ಬಹುಮಾನವಾಗಿ ಪ್ರಥಮ ೫೦೦೦, ದ್ವಿತೀಯ ೩೦೦೦ ಹಾಗೂ ತೃತಿಯ ಬಹುಮಾನ ೨೦೦೦ ರೂ.ಗಳನ್ನು ನೀಡಲಾಗುವುದು.
ಬೆಂಗಳೂರಿನಲ್ಲಿ ಆಯೋಜಿಸುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತರು ಸ್ವತಃ ತಿನಿಸನ್ನು ತಯಾರಿಸಲು ಅವಶ್ಯವಿರುವ ಸಾಮಗ್ರಿಗಳೊಂದಿಗೆ ಸಿದ್ದರಿರಬೇಕು. ಜಿಲ್ಲಾ ಮಟ್ಟದ ಪ್ರಥಮ ಬಹುಮಾನ ವಿಜೇತರು ನಿಗದಿತ ದಿನಾಂಕದAದು ಸ್ವತಃ ಬೆಂಗಳೂರಿನಲ್ಲಿ ಆಯೋಜಿಸುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಖಾದ್ಯವನ್ನು ತಯಾರಿಸಲು ಬೇಕಾದ ಸಾಮಗ್ರಿಗಳನ್ನು ತಾವೆ ತೆಗೆದುಕೊಂಡು ನಿಗದಿತ ಸ್ಥಳ ಹಾಗೂ ಸಮಯದಲ್ಲಿ ಖುದ್ದಾಗಿ ಅಲ್ಲಿಯೇ ತಯಾರಿಸಲು ಸಿದ್ದರಿರಬೇಕು. ಸ್ಪರ್ಧೆಯಲ್ಲಿ ತಯಾರಿಸಿದ ಖಾದ್ಯಗಳ ಚಿತ್ರಣವನ್ನು ವಿಡೀಯೊದಲ್ಲಿ ಕಡ್ಡಾಯವಾಗಿ ದಾಖಲು ಮಾಡಲಾಗುತ್ತದೆ.
ಆಸಕ್ತರು ತಮ್ಮ ಹೆಸರನ್ನು ನವೆಂಬರ್ ೩೦ರೊಳಗಾಗಿ ನೋಂದಾಯಿಸಬೇಕಾಗಿದ್ದು, ನೋಂದಣಿ ಅಥವಾ ಹೆಚ್ಚಿನ ಮಾಹಿತಿಗಾಗಿ ಮೊ.ಸಂ: ೯೬೧೧೭೦೯೦೮೯ ಗೆ ಕರೆ ಮಾಡಬಹುದಾಗಿದೆ ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ಟಿ.ರುದ್ರೇಶಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.