
ಜನ ಸಾಮಾನ್ಯರಲ್ಲಿ ಮಾನವ ಕಳ್ಳ ಸಾಗಾಣಿಕೆ ಕುರಿತ ಕಾನೂನಿನ ಅರಿವು ಮೂಡಿಸಬೇಕು : ನ್ಯಾ.ರಾಜೇಶ್ ಎನ್.ಹೊಸಮನೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 30- ಜಗತ್ತಿನಲ್ಲಿ ಮಾದಕ ವಸ್ತು ಸಾಗಾಣಿಕೆ, ಶಸ್ತಾçಸ್ತç ಸಾಗಾಣಿಕೆ ಸೇರಿದಂತೆ ಮೂರನೇ ಅತಿದೊಡ್ಡ ದಂಧೆ ಎಂದರೆ ಮಾನವ ಕಳ್ಳ ಸಾಗಾಣಿಕೆ, ಈ ಕುರಿತು ಜನ ಸಾಮಾನ್ಯರಲ್ಲಿ ಕಾನೂನಿನ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ‘ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ’ ಅಂಗವಾಗಿ ಮಂಗಳವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿನ ಅಪ್ರಾಪ್ತ ಮಕ್ಕಳು, ಮಹಿಳೆಯರು ಸೇರಿದಂತೆ ವ್ಯಕ್ತಿಗಳನ್ನು ಕಳ್ಳ ಸಾಗಾಣಿಕೆ ಮಾಡಿ ಲೈಂಗಿಕ ಶೋಷಣೆ, ಭಿಕ್ಷಾಟನೆ, ಜೀತ, ಬಾಲ ಕಾರ್ಮಿಕರ ಕೆಲಸ, ಅಂಗಾAಗ ಕಸಿ, ಬಾಲ್ಯ ವಿವಾಹ ಮತ್ತು ವೇಶ್ಯೆವಾಟಿಕೆ ಚಟುವಟಿಕೆಗಳಲ್ಲಿ ಬಳಸಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರಲ್ಲಿ ಕಾನೂನು ಮತ್ತು ಶಿಕ್ಷೆ ಬಗ್ಗೆ ಜಾಗೃತಿ ಮೂಡಿಸಿ ಸಂಪೂರ್ಣವಾಗಿ ನಿರ್ಮೂಲನೆಯಾಗಬೇಕು ಎಂದು ಹೇಳಿದರು.
ಜನ ಸಾಮಾನ್ಯರಲ್ಲಿ ವಿದೇಶಗಳಿಗೆ ಕರೆದೊಯ್ದು ಕೆಲಸ ಕೊಡಿಸುವ ಆಸೆ ಆಮೀಷ ಒಡ್ಡುವಂತಹ ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕುರಿತು ಸಾರ್ವಜನಿಕರು ಎಚ್ಚರವಹಿಸಬೇಕು ಎಂದರು.
ಲೈಂಗಿಕ ಶೋಷಣೆಗಾಗಿ ಹೆಚ್ಚು ಅಪಹರಣವಾಗುವ ನಿದರ್ಶನಗಳಿದ್ದು, ಬಡತನದಿಂದ ಮುಕ್ತರಾಗಲು ಪೋಷಕರು ತಮ್ಮ ಅಪ್ರಾಪ್ತ ಮಕ್ಕಳನ್ನು ಕೆಲಸಕ್ಕೆ ಕಳುಹಿಸಿದರೆ ಅದು ಶಿಕ್ಷಾರ್ಹ ಅಪರಾಧವಾಗುತ್ತದೆ. ಸ್ವಸ್ಥ ಸಮಾಜ ನಿರ್ಮಾಣ ಮಾಡಲು ವಿವಿಧ ಇಲಾಖೆಗಳೊಡನೆ ಸಾರ್ವಜನಿಕರು ಕೈ ಜೋಡಿಸಬೇಕು ಎಂದು ತಿಳಿಸಿದರು. ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ದಂಧೆಯು ಸಮಾಜದ ಕಪ್ಪು ಚುಕ್ಕೆಯಾಗಿ ಪರಿಣಮಿಸಿದ್ದು, ಮಾನವ ಕಳ್ಳ ಸಾಗಾಣಿಕೆಯು ಕಾನೂನು ಬಾಹಿರವಾಗಿದೆ ಎಂದು ಹೇಳಿದರು.
ಮಾನವ ಕಳ್ಳ ಸಾಗಾಣಿಕೆಯಿಂದ ಇಂದಿನ ಪೀಳಿಗೆ ಹಾದಿ ತಪ್ಪುತ್ತಿದೆ. ಆರ್ಥಿಕ ಸಮಸ್ಯೆಯಿಂದ ಪೋಷಕರು ಸಮಾಜದಲ್ಲಿ ಸ್ವಯಂ ಪ್ರೇರಿತರಾಗಿ ಮಾನವ ಕಳ್ಳ ಸಾಗಾಣಿಕೆಗೆ ಒತ್ತು ನೀಡುತ್ತಿದ್ದಾರೆ. ಸಾಮಾಜಿಕ ಜವಾಬ್ಧಾರಿಯ ಬಗ್ಗೆ ವಿವಿಧ ಇಲಾಖೆಗಳ ಸಂಘಟನಾತ್ಮಕ ಸಹಕಾರದಿಂದ ಪೋಷಕರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಕೆ.ಹೆಚ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಾನವ ಕಳ್ಳಸಾಗಾಣಿಕೆ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ “ಕಾವಲು” ಸಮಿತಿ ರಚನೆ ಮಾಡಲಾಗಿದ್ದು, ಸಮಿತಿಯಲ್ಲಿ ತಹಶೀಲ್ದಾರ್, ಗ್ರಾ.ಪಂ ಅಧ್ಯಕ್ಷ, ಗ್ರಾ,ಪಂ ಅಭಿವೃದ್ಧಿ ಅಧಿಕಾರಿ, ಗ್ರಾ,ಪಂ ಕಾರ್ಯದರ್ಶಿ, ಶಾಲಾ ಮುಖ್ಯ ಗುರುಗಳು, ಪೊಲೀಸ್ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಆಶಾ ಕಾರ್ಯಕರ್ತೆ, ಪ್ರೌಢಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿ ಸೇರಿದಂತೆ ಸ್ತಿçà ಶಕ್ತಿ ಸಂಘದ ಮಹಿಳೆಯನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದರು. ಇದೇ ವೇಳೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಪ್ರತಿಜ್ಞಾ ವಿಧಿ ಭೋಧಿಸಿದರು.
ಈ ಸಂಧರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಲಾಲಪ್ಪ ಎ.ಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ ಮೇಲ್ವಿಚಾರಕರು ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.