
ಜಿಲ್ಲೆಯಾದ್ಯಂತ ಕುಷ್ಠರೋಗ ಪತ್ತೆಹಚ್ಚುವ ಅಭಿಯಾನ ಆರಂಭ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 29- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಾದ್ಯಂತ ಜುಲೈ 29 ರಿಂದ ಆಗಸ್ಟ್ 14 ರವೆರೆಗೆ ಹಮ್ಮಿಕೊಂಡಿರುವ ಕುಷ್ಠರೋಗ ಪ್ರಕರಣ ಪತ್ತೆಹಚ್ಚುವ ಅಭಿಯಾನ ಕಾರ್ಯಕ್ರಮ ಸೋಮವಾರದಂದು ಪ್ರಾರಂಭವಾಗಿದ್ದು, ಆಶಾ ಕಾರ್ಯಕರ್ತೆಯರು ಮತ್ತು ಪುರುಷ ಸ್ವಯಂ ಸೇವಕರು ಮನೆ – ಮನೆಗೆ ಭೇಟಿ ನೀಡಿ ಚರ್ಮದ ಮೇಲಿನ ಯಾವುದೇ ತಿಳಿ ಬಿಳಿ ತಾಮ್ರ ಬಣ್ಣದ ಮಚ್ಚೆ ಹಾಗೂ ಇತ್ಯಾದಿ ಚರ್ಮದ ರೋಗ ಲಕ್ಷಣಗಳ ಕುರಿತು ತಪಾಸಣೆ ಕೈಗೊಳ್ಳುತ್ತಿದ್ದಾರೆ.
ಈ ಅಭಿಯಾನದಲ್ಲಿ ಜಿಲ್ಲೆಯಾದ್ಯಂತ ಪ್ರತಿ ತಂಡದಲ್ಲಿ ಇಬ್ಬರಂತೆ ಒಟ್ಟು 2,300 ಸದಸ್ಯರನ್ನು ಒಳಗೊಂಡ 1,150 ತಂಡಗಳನ್ನು ರಚಿಸಲಾಗಿದೆ.
ಈ ತಂಡಗಳ ಮೇಲ್ವಿಚಾರಣೆಗಾಗಿ 115 ಸದಸ್ಯರ ಮೇಲ್ವಿಚಾರಣಾ ತಂಡಗಳನ್ನು ರಚಿಸಲಾಗಿರುತ್ತದೆ. ಸಮೀಕ್ಷೆಯಲ್ಲಿ ಕಂಡುಹಿಡಿದ ರೋಗಿಗಳಿಗೆ ಸೂಕ್ತ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಅಧಿಕಾರಿ ಡಾ.ಎಚ್.ಪ್ರಕಾಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.