ದೀಪಾವಳಿ ಹಬ್ಬ ಆಚರಣೆ : ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹ, ಮಾರಾಟ ನಿಷೇಧ
ಕರುನಾಡ ಬೆಳಗು ಸುದ್ದಿ
ವಿಜಯನಗರ, 23- ದೀಪಾವಳಿ ಆರಂಭವಾಗುತ್ತಿದ್ದು ಹಬ್ಬ ಆಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಂ.ಎಸ್.ದಿವಾಕರ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಹಾಗೂ ಸಂಬ0ಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದAತೆ ರಾತ್ರಿ 8 ಗಂಟೆಯಿAದ 10 ಗಂಟೆಯವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶವಿರುತ್ತದೆ. ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಹಾಗೂ ಇನ್ನಾವುದೇ ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಪಟಾಕಿಗಳನ್ನು ಸ್ಪೋಟಿಸುವಂತಿಲ್ಲ ಅಥವಾ ಬಳಸುವಂತಿಲ್ಲ.
ಈ ಆದೇಶವನ್ನು ಅನುಷ್ಠಾನಕ್ಕೆ ತರಲು ತಹಶೀಲ್ದಾರರು, ತಾಲ್ಲೂಕುಗಳಲ್ಲಿ ಜಿಲ್ಲಾ ಅಗ್ನಿ ಶಾಮಕ ಪಡೆ ಅಧಿಕಾರಿ, ಸ್ಥಳೀಯ ಸಂಸ್ಥೆಯ ಅಧಿಕಾರಿಗಳು, ಜಿಲ್ಲಾ ಪರಿಸರ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಆಸಕ್ತ ನಾಗರಿಕರು ಹಾಗೂ ಸ್ಥಳೀಯ ಸರ್ಕಾರೇತರ ಸಂಘ, ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆ ರಚಿಸಿ, ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ವಿವರಿಸಿದ್ದಾರೆ.
