images

ಸ್ವಪ್ರೇರಣೆಯಿಂದ ಮಾನವ ಸರಪಳಿಯಲ್ಲಿ ಭಾಗವಹಿಸಿ : ದೊಡ್ಡನಗೌಡ ಎಚ್ ಪಾಟೀಲ್

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 13- ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಅಂಗವಾಗಿ ಕೊಪ್ಪಳ ಜಿಲ್ಲೆಯಲ್ಲಿ ಸೆ.15ರಂದು ಆಯೋಜಿಸಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಸಂಘ-ಸAಸ್ಥೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ-ಅರೆ ಸರ್ಕಾರಿ ನೌಕರರು ಸೇರಿದಂತೆ ಪ್ರತಿಯೊಬ್ಬರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಮನವಿ ಮಾಡಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಸೆಪ್ಟೆಂಬರ್ 15 ರಂದು 53 ಕಿ.ಮೀ ಬೃಹತ್ ಮಾನವ ಸರಪಳಿ ನಡೆಯಲಿದೆ. ವಿಶೇಷವಾದ ಈ ಕಾರ್ಯಕ್ರಮವು ಜಿಲ್ಲೆಯಲ್ಲಿ ಸಹ ಯಶ ಕಾಣಬೇಕು. ಜನತೆ ಸ್ವಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!