
ಗರ್ಭಕೋಶ ಮತ್ತು ಸ್ಥನ ಕ್ಯಾನ್ಸರ್ ಬಗ್ಗೆ ಭೀತಿ ಬೇಡ : ಡಾ.ಶೋಭರಾಣಿ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 25- ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ, ಬಳ್ಳಾರಿ ಹಾಗೂ ಬಳ್ಳಾರಿ ಜಿಲ್ಲಾ ಪೊಲೀಸ್ ರವರ ಸಹಯೋಗದೊಂದಿಗೆ ಬಳ್ಳಾರಿ ಜಿಲ್ಲೆಯ ಮಹಿಳಾ ಪೊಲೀಸ್ ಸಿಬ್ಬಂದಿಗೆ ಗರ್ಭಕೋಶದ ಕ್ಯಾನ್ಸರ್ ಮತ್ತು ಹೆಚ್‌ಪಿವಿ ವ್ಯಾಕ್ಸಿನ್ ಬಗ್ಗೆ ಅರಿವು ಮತ್ತು ತಪಾಸಣಾ ಶಿಬಿರವನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ ಕಾರ್ಯಕ್ರಮ ವನ್ನುದ್ದೇಶಿಸಿ ಮಾತನಾಡುತ್ತಾ “ಗರ್ಭಕೋಶ ಮತ್ತು ಸ್ಥನ ಕ್ಯಾನ್ಸರ್‌ನಲ್ಲಿ ಸಾವಿನ ಸಂಖ್ಯೆ ಹೆಚ್ಚು ಕಂಡು ಬರುತ್ತಿದೆ. ಅದರಲ್ಲಿಯೂ ಶೇಕಡಾ ೭೭% ರಷ್ಟು ಮಹಿಳೆಯರಲ್ಲಿ ಸಾವು – ನೋವುಗಳು ಹೆಚ್ಚಳವಾಗಿದೆ ಅಂದರೆ ಭಾರತದಲ್ಲಿ ಪ್ರತಿ ೮ ನಿಮಿಷಕ್ಕೆ ಒಬ್ಬ ಮಹಿಳೆ ಗರ್ಭಕಂಠದ ಕ್ಯಾನ್ಸರ್ ನಿಂದ ಸಾವನ್ನಪ್ಪುತ್ತಿದ್ದಾರೆ. ಹಾಗಾಗಿಯೇ ಇದರ ಬಗ್ಗೆ ಅರಿವು ಹಾಗೂ ತಪಾಸಣೆಯ ಮಹತ್ವ ಹೆಚ್ಚಿಸಬೇಕೆಂದು ಜಿಲ್ಲೆಯ ಎಲ್ಲಾ ಮಹಿಳಾ ಪೊಲೀಸ್ ಸಿಬ್ಬಂದಿಗೆ ಈ ಶಿಬಿರವನ್ನು ಏರ್ಪಡಿಸಿಲಾಗಿದೆ” ಎಂದು ಹೇಳಿದರು.
ಕಾರ್ಯಕ್ರಮದ ಉದ್ಘಾಟಕನೆಯನ್ನು ನೆರವೇರಿಸಿ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾದ ಬಳ್ಳಾರಿ ಶಾಖೆಯ ಅಧ್ಯಕ್ಷರಾದ ಟಿ.ಜಿ.ವಿಠ್ಠಲ್ ಕಾರ್ಯಕ್ರಮದ ಕುರಿತು ಮಾತನಾಡುತ್ತಾ “ನಮ್ಮ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಸಂಸ್ಥೆಯು ಕಳೆದ ೭೫ ವರ್ಷಗಳಿಂದ ಆರೋಗ್ಯ ಸೇವೆ ನೀಡುತ್ತಾ ಬಂದಿದೆ. ಹಾಗೆಯೇ ಇದು ಲಾಭದಾಯಕ ಸಂಸ್ಥೆ ಅಲ್ಲದಿರುವುದರಿಂದ ಕೇವಲ ಆರೋಗ್ಯ ಸೇವೆಗಾಗಿ ಇರುವ ಸಂಸ್ಥೆ ಎಂದು ಹೇಳುತ್ತಾ ಆಧುನಿಕ ತಂತ್ರಜ್ಞಾನ ಬಳಸಿ ಗರ್ಭಕಂಠದ ಕ್ಯಾನ್ಸರ್ ಅನ್ನು ನಿಖರವಾಗಿ ಪತ್ತೆ ಹಚ್ಚಿ ಮತ್ತು ಅದರ ತಪಾಸಣೆಯನ್ನು ಅತೀ ಕಡಿಮೆ ವೆಚ್ಚದಲ್ಲಿ ಮಾಡಿಕೊಡುವ ವ್ಯವಸ್ಥೆಯನ್ನು ಹೊಂದಿದೆ ಎಂದು ತಿಳಿಸಿದರು.