
ಜಿಲ್ಲಾ ವಾರ್ತಾಧಿಕಾರಿಯಾಗಿ ಡಾ.ಸುರೇಶ್ ಅಧಿಕಾರ ಸ್ವೀಕಾರ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 21- ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿಯಾಗಿ ಡಾ.ಸುರೇಶ್ ಜಿ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಗವಿಸಿದ್ದಪ್ಪ ಹೊಸಮನಿ ಅವರು ರಾಯಚೂರು ಜಿಲ್ಲೆಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಸಹಾಯಕ ನಿರ್ದೇಶಕರ ಹುದ್ದೆಯ ಪ್ರಭಾರವನ್ನು ಡಾ.ಸುರೇಶ್ ಜಿ ಅವರು ವಹಿಸಿಕೊಂಡರು ನಿರ್ಗಮಿತ ಅಧಿಕಾರಿಗಳು ನೂತನ ಜಿಲ್ಲಾ ವಾರ್ತಾಧಿಕಾರಿಗಳಿಗೆ ಹೂಗುಚ್ಚ ನೀಡಿ ಅಧಿಕಾರ ಹಸ್ತಾಂತರಿಸಿದರು.
ಡಾ.ಸುರೇಶ್ ಜಿ ಅವರು ಬೀದರ್ ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದಕ್ಕೂ ಪೂರ್ವದಲ್ಲಿ ಕೊಪ್ಪಳ ಜಿಲ್ಲಾ ಪ್ರಭಾರಿ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲೆಯ ಪತ್ರಕರ್ತರು, ಕಚೇರಿಯ ಸಿಬ್ಬಂದಿಯವರು ಡಾ.ಸುರೇಶ್ ಜಿ ಅವರಿಗೆ ಆತ್ಮೀಯವಾಗಿ ಸ್ವಾಗತ ಕೋರಿದರು.