WhatsApp Image 2024-08-14 at 5.14.45 PM

ಕುಡಿಯುವ ನೀರು ಸರಬರಾಜು ವಿವಿಧ ಕಾಮಗಾರಿ ಪರಿಶೀಲನೆ : ಸಿಇಓ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 14- ತಾಲೂಕಿನ ಉಪ್ಪಾರ್ ಹೊಸಳ್ಳಿ ಗ್ರಾಮದ ಕುಡಿಯುವ ನೀರಿನ ಕೆರೆಗೆ ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಭೇಟಿ ನೀಡಿ ಪರಿಶೀಲಿಸಿದರು.

ಸ್ವಚ್ಛಗೊಳಿಸಿ ಶುದ್ಧೀಕರಿಸಿದ ನೀರನ್ನು ಸರಬರಾಜು ಮಾಡುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿದರು ಹಾಗಲೂರು ಹೊಸಳ್ಳಿ ಗ್ರಾಮ ಪಂಚಾಯತ್ ನಲ್ಲಿ ನರೇಗಾ ಯೋಜನೆ ಅಡಿ ಶಾಲಾ ಶೌಚಾಲಯ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು ಉಪ್ಪಾರ್ ಹೊಸಳ್ಳಿ ಹಾಗೂ ಬಲಕುಂದಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ನರೇಗಾ ಯೋಜನೆ ಅಡಿ ಅನುಷ್ಠಾನ ಗೊಂಡಿರುವ 02 ದನದ ಷಡ್ ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ಸಿರುಗುಪ್ಪ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್ ಎಸ್ ದಂಡಪ್ಪನವರ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎ ಇ ಇ ರವೀಂದ್ರ ನಾಯಕ್, ಸಿರುಗುಪ್ಪ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್, ಪಿಡಿ,ಓ ತಾಂತ್ರಿಕ ಸಹಾಯಕರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರಿದ್ದರು.

Leave a Reply

Your email address will not be published. Required fields are marked *

error: Content is protected !!