
ಕೊಪ್ಪಳ : 19 ರಂದು ವಿದ್ಯುತ್ ಗ್ರಾಹಕರ ಸಭೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 15- ಜೆಸ್ಕಾಂ ಕೊಪ್ಪಳ ಉಪ-ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿದ್ಯುಚ್ಛಕ್ತಿ ಗ್ರಾಹಕರ ವಿದ್ಯುತ್‌ಶಕ್ತಿಗೆ ಸಂಬ00ಧಿಸಿದ ಅಹವಾಲುಗಳು ಮತ್ತು ಕುಂದು ಕೊರತೆಗಳನ್ನು ಪರಿಹರಿಸಲು ನವೆಂಬರ್ ೧೬ರಂದು ಬೆಳಿಗ್ಗೆ ೧೧ ಗಂಟೆಗೆ ಗ್ರಾಹಕರ ಅಹವಾಲು ಸ್ವೀಕಾರ ಸಭೆಯನ್ನು ಆಯೋಜಿಸಲಾಗಿದೆ.
ಕೊಪ್ಪಳದ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಕಚೇರಿ ಸಭಾಂಗಣದಲ್ಲಿ ನಡೆಯಲಿರುವ ಈ ಸಭೆಗೆ ವಿದ್ಯುತ್ ಗ್ರಾಹಕರು ಪಾಲ್ಗೊಂಡು ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಕ ಅಭಿಯಂತರರು ತಿಳಿಸಿದ್ದಾರೆ.