
ಯುವನಿಧಿ ಯೋಜನೆಗೆ ಅರ್ಹರು ಹೆಸರು ನೋಂದಾಯಿಸಿಕೊಳ್ಳಿ : ಪಿ.ಎಸ್.ಹಟ್ಟಪ್ಪ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 22- ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹರು ನೋಂದಾಯಿಸಿಕೊಳ್ಳುವAತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.
ಈ ಯೋಜನೆಯಡಿ ಪದವೀಧರರಿಗೆ ರೂ.೩೦೦೦ ಮತ್ತು ಡಿಪ್ಲೋಮಾ ಪದವೀಧರರಿಗೆ ರೂ.೧೫೦೦ ನೀಡಲಾಗುತ್ತದೆ.
ಅರ್ಹರು ಸೇವಾ ಸಿಂಧು ಪೋರ್ಟಲ್, ಅಟಲ್ ಜೀ ಕೇಂದ್ರ, ಕರ್ನಾಟಕ-೧, ಬಳ್ಳಾರಿ-೧ ಮತ್ತು ಇತರೆ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದು.
ಅರ್ಹತೆ : ೨೦೨೩-೨೪ನೇ ಸಾಲಿನಲ್ಲಿ ಪದವಿ, ಸ್ನಾತ್ತಕೋತ್ತರ ಅಥವಾ ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಪದವಿ, ಡಿಪ್ಲೋಮಾ ನಂತರ ಕನಿಷ್ಠ ೬ ತಿಂಗಳ/೧೮೦ ದಿನಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಅಥವಾ ಸ್ವಯಂ ಉದ್ಯೋಗ ಹೊಂದಿಲ್ಲದವರಾಗಿರಬೇಕು.
ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಅರ್ಹರು. ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ ೬ ವರ್ಷಗಳವರೆಗೆ ಪದವಿ, ಡಿಪ್ಲೋಮಾ ಅಧ್ಯಯನ ಮಾಡಿದವರು).
ಬೇಕಾದ ದಾಖಲೆ : ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಸಂಖ್ಯೆ, ಮೊಬೈಲ್ ನಂಬರ್.
ಪ್ರತಿ ತಿಂಗಳು ಸ್ವಯಂ ದೃಢೀಕೃತ ನಿರುದ್ಯೋಗಿ ಪ್ರಮಾಣ ಪತ್ರವನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ. ತಪ್ಪು ಮಾಹಿತಿ ನೀಡಿದಲ್ಲಿ ದಂಡ ವಿಧಿಸಲಾಗುವುದು.
ನೊಂದಾಯಿಸಿಕೊಳ್ಳಲು ಸೇವಾ ಸಿಂಧು ವೆಬ್ ಪೋರ್ಟಲ್ ವಿಳಾಸ : https://sevasindhugs.karnataka.gov.in ಗೆ ಭೇಟಿ ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಹಳೆಯ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ: ೯೭೪೨೭೧೮೮೯೧, ೮೨೭೭೦೦೦೬೧೯, ೯೯೦೦೮೨೭೭೬೮, ೬೩೬೦೪೦೮೦೯೪, ೮೮೬೧೮೬೬೭೫೨ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.