
5 ರಂದು ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮ
ಕರುನಾಡ ಬೆಳಗು ಸುದ್ದಿ
ವಿಜಯನಗರ, 1- ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಇವರು ಸ್ವಂತ ಉದ್ಯೋಗವನ್ನು ಕೈಗೊಳ್ಳಲು ಇಚ್ಚಿಸುವ ಎಲ್ಲಾ ವರ್ಗದ ಯುವಕ ಯುವತಿಯರಿಗಾಗಿ ಒಂದು ದಿನದ ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮವನ್ನು ಸೆಪ್ಟಂಬರ್ ೫ ರಂದು ಹೊಸಪೇಟೆಯ ತಾಲೂಕು ಪಂಚಾಯಿತಿಯಲ್ಲಿ ಆಯೋಜಿಸಿದ್ದು ಆಸಕ್ತರು ಭಾಗವಹಿಸಬಹುದು.
ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಆಸಕ್ತರಿಗೆ ಪ್ರೇರೇಪಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು, ಪ್ರೋತ್ಸಾಹ ಮತ್ತು ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಹೆಸರು ನೋಂದಾಯಿಸಬಹುದು ಅಥವಾ ನೇರವಾಗಿ ಸೆಪ್ಟಂಬರ್ ೫ರಂದು ತಾಲೂಕ ಪಂಚಾಯತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಭಾಗವಹಿಸುವವರು ಕನಿಷ್ಟ ೧೮ ವರ್ಷಗಳ ವಯಸ್ಸಿನವರಾಗಿರಬೇಕು ಹಾಗೂ ಓದಲು, ಬರೆಯಲು ಬರುತ್ತಿರಬೇಕು. ಹೆಚ್ಚಿನ ಮಾಹಿತಿಗಾಗಿ ಮೊ: ೬೩೬೨೬೮೧೧೯೦, ೯೯೮೬೩೩೨೭೩೬ ಇವರನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ವಿಜಯನಗರ ಜಿಲ್ಲೆಯ ಸಿಡಾಕ್‌ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.