
ಪ್ರತಿಯೊಂದು ಮಕ್ಕಳಲ್ಲಿ ಪ್ರತಿಭೆ ಇರುತ್ತದೆ ಅದನ್ನು ಗುರುತಿಸಿ ಪ್ರೋತ್ಸಾಹಿಸಿ : ಬಸವರಾಜ ತೆನ್ನಳ್ಳಿ
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ, 7- ಪ್ರತಿಯೊಂದು ಮಕ್ಕಳಲ್ಲಿ ಒಂದು ಪ್ರತಿಭೆ ಇರುತ್ತದೆ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಮಕ್ಕಳನ್ನು ಪ್ರೋತ್ಸಾಹಿಸಿಬೇಕು. ಎಂದು ತಹಶೀಲ್ದಾರ್ ಬಸವರಾಜ ತೆನ್ನಳ್ಳಿ ಹೇಳಿದರು.
ಪಟ್ಟಣದ ಜನನಿ ಗ್ರುಪ್ ಇನ್ ಸ್ಟಿಟ್ಯೂಟ್ ಆಫ್ ಗವಿಸಿದ್ದೇಶ್ವರ ಇನ್ ಸ್ಟಿಟ್ಯೂಟ್ ಪ್ಯಾರಾ ಮೆಡಿಕಲ್.ಹೇಮಾದ್ರಿ ಆಂಗ್ಲ ಮಾಧ್ಮಮ ಶಾಲೆಯಲ್ಲಿ ಯಲುಬುರ್ಗಾ-ಕುಕನೂರು ತಾಲೂಕಾ ಮಟ್ಟದ ಪ್ರಾಥಮಿಕ, ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿ, ಮಕ್ಕಳ್ಳು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣ ಗೊಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿ ತಾಲೂಕಿಗೆ ಕಿರ್ತಿ ತರುವಂತಾಗಬೇಕು ಮಕ್ಕಳಲ್ಲಿರುವ ಪ್ರತಿಭೆ ಕಾರಂಜಿಯ0ತೆ ಹೋರ ಹೊಮ್ಮಲಿ ಆಶು ಭಾಷಣ ಪ್ರಬಂಧ ಸ್ಪರ್ಧೆ ಮಕ್ಕಳಿಗೆ ವೇದಿಕೆ ಕಲ್ಪಿಸುತ್ತವೆ ವಿವಿಧ ಸೇವೆ ಸಲ್ಲಿಸಲು ಅವಕಾಶ ಲಭಿಸಲಿದೆ ಸೋಲು ಗೆಲವೂ ಮುಖ್ಯವಲ್ಲ ಸ್ಪರ್ಧೆಯಲ್ಲಿ ಭಾಗವಹಿಸುವದು ಮುಖ್ಯ ಎಂದು ಹೇಳಿದರು. ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಬೀರದಾರ ಪಾಟೀಲ್ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯತ ಅಧ್ಯಕ್ಷ ಅಂದಯ್ಯ ಕಳ್ಳಿಮಠ ವಹಿಸಿ ಮಾತನಾಡಿದರು.
ನಂತರ ಪ್ರಾಸ್ತಾವಿಕವಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ್ರ ಪಾಟೀಲ್ ಮಾತನಾಡಿದರು.
ಕ್ಷೇತ್ರ ಸಮನ್ವಯಾಧಿಕಾರಿ ಅಶೋಕ ಗೌಡರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಟಿ.ಜೆ.ದಾನಿ, ಜನನಿ ಗ್ರೂಫ್ ಆಫ್ ಇನ್ ಸ್ಟಿಟ್ಯೂಟ್ಸ ಅಧ್ಯಕ್ಷ ರಂಗನಾಥ ವಲ್ಮಕೊಂಡಿ, ದೈಹಿಕ ಶಿಕ್ಷಣಾಧಿಕಾರಿ ವೀರಭದ್ರಪ್ಪ ಅಂಗಡಿ, ಶಿಕ್ಷಣ ಸಂಯೋಜಕ ಕನಕಪ್ಪ ಕಂಬಳಿ, ಸಿಆರ್‌ಪಿ ಹುಸೇನ್ ಸಾಬ ಭಾಗವಾನ, ಕರ್ನಾಟಕ ರಾಜ್ಯ ಶಿಕ್ಷಕರ ಸಂಘದ ಯಲಬುರ್ಗಾ ತಾಲೂಕ ಅಧ್ಯಕ್ಷ ಬಸವರಾಜ ಮಾಸ್ತಿ, ಕರ್ನಾಟಕ ರಾಜ್ಯ ಪ್ರೌಢ ಶಾಲೆಯ ಕುಕನೂರು ತಾಲೂಕ ಅಧ್ಯಕ್ಷ ಬಸವರಾಜ ಮೇಟಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಯಲಬುರ್ಗಾ ತಾಲೂಕ ಅಧ್ಯಕ್ಷ ಎಸ್.ವಿ.ಧರಣಾ, ಕುಕನೂರು ತಾಲೂಕ ಅಧ್ಯಕ್ಷ ಮಾರುತೇಶ ತಳವಾರ, ಜನನಿ ಗ್ರಾಮಿಣಾಭಿವೃದ್ಧಿ ಸಂಸ್ಥೆಯ ಗೌರವಾಧ್ಯಕ್ಷ ಬಸವರಾಜ ವಲ್ಮಕೊಂಡಿ, ಬಿಆರ್‌ಪಿ ಸಂಗಮೇಶ ತೋಟದ, ಪ್ರಾಂಶಪಾಲ ಪ್ರಾಣೇಶ ವಲ್ಮಕೊಂಡಿ, ಮುಖ್ಯೋಪಾಧ್ಯಾಯ ಲೋಕೇಶ ಲಮಾಣಿ ಸೇರಿದಂತೆ ಮತ್ತು ಇತರರು ಭಾಗವಹಿಸಿದ್ದರು.