ಭಾಗ್ಯನಗರ : ಫ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 22- ಭಾಗ್ಯನಗರ ಪಟ್ಟಣ ಪಂಚಾಯತಿ ವತಿಯಿಂದ ೨೦೨೩-೨೪ನೇ ಸಾಲಿನ ಎಸ್.ಎಫ್.ಸಿ ಅನುದಾನದಲ್ಲಿ ಶೇ.೨೪.೧೦ ರ ಯೋಜನೆಯಲ್ಲಿ ಶೇ.೪೦ ರಷ್ಟು ವ್ಯಕ್ತಿಗತ ಕಾರ್ಯಕ್ರಮದ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿವಿಧ ಹಂತಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫ್ರೋತ್ಸಾಹಧನ ನೀಡಲು ಅರ್ಜಿ ಅಹ್ವಾನಿಸಲಾಗಿದ್ದು, ನಿಗದಿಪಡಿಸಿದ ಅರ್ಜಿಗಳು ಸ್ವೀಕೃತಿಯಾಗದ ಕಾರಣ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ ೩೦ರವರೆಗೆ ವಿಸ್ತರಿಸಲಾಗಿದೆ.
ಅರ್ಹ ಫಲಾನುಭವಿಗಳು ಅರ್ಜಿಯೊಂದಿಗೆ ಪ್ರಸ್ತುತ ವರ್ಷದ ವ್ಯಾಸಂಗ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಕುಟುಂಬದ ಪಡಿತರ ಚೀಟಿ, ಅಂಕಪಟ್ಟಿಗಳು, ಜಾತಿ, ಆದಾಯ ಪ್ರಮಾಣ ಪತ್ರದ ಝರಾಕ್ಸ್ ಪ್ರತಿಗಳು ಮತ್ತು ೦೨ ಭಾವಚಿತ್ರಗಳನ್ನು ನವೆಂಬರ್ ೩೦ ರೊಳಗಾಗಿ ಪ.ಪಂ. ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.