
ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, ೩- ಕೃಷಿ ಇಲಾಖೆಯಿಂದ ೨೦೨೪-೨೫ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಜಿಲ್ಲೆಯ ಆಸಕ್ತ ರೈತ ಮತ್ತು ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಅಕ್ಟೋಬರ್ ೨೧ ರವರೆಗೆ ವಿಸ್ತರಿಸಲಾಗಿದೆ. ಜಿಲ್ಲೆಯ ರೈತ ಬಾಂಧವರು ಈ ಕಾರ್ಯಕ್ರಮದಡಿ ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿಮಾಡಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಹಾಗೂ ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳು ಹಾಗೂ ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್ ತಿಳಿಸಿದ್ದಾರೆ.