ವಿವಿಧ ನಿಗಮಗಳ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಕರುನಾಡ ಬೆಳಗು ಸುದ್ದಿ
ವಿಜಯನಗರ, 6- ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ೨೦೨೪-೨೫ನೇ ಸಾಲಿನ ವಿವಿಧ ನಿಗಮಗಳ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಸೆಪ್ಟಂಬರ್ ೧೫ ರವರೆಗೆ ಅವಧಿ ವಿಸ್ತರಿಸಲಾಗಿದೆ.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮ, ಕರ್ನಾಟಕ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ದಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ದಿ ನಿಗಮ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ, ಕರ್ನಾಟಕ ರಾಜ್ಯ ಗೊಲ್ಲ ಕಾಡುಗೊಲ್ಲ ಅಭಿವೃದ್ದಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮಗಳಿಂದ ೨೦೨೪-೨೫ನೇ ಸಾಲಿಗೆ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವ್ಯಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)., ಹೊಲಿಗೆ ಯಂತ್ರ ವಿತರಣೆ ಯೋಜನೆ (ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮಕ್ಕೆ ಮಾತ್ರ)., ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿದಾರರು ಕರ್ನಾಟಕ-ಒನ್, ಅಟಲ್-ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ಅಡಿ ಅರ್ಜಿ ಸಲ್ಲಿಸಬಹುದಾಗಿದೆ ಹಾಗೂ ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಅರ್ಜಿ ಸಲ್ಲಿಸಲು ವೆಬ್ ಸೈಟ್ hಣಣಠಿs://ತಿತಿತಿ.ಞಚಿushಚಿಟಞಚಿಡಿ.ಛಿom ಗೆ ಸಂಪರ್ಕಿಸಬಹುದಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.