kpl DC 9

ಮಾನವ ಸರಪಳಿ ಕಾರ್ಯಕ್ರಮಕ್ಕೆ ವಿವಿಧ ಸಮಿತಿಗಳ ರಚನೆ : ನಲಿನ್ ಅತುಲ್

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 12- ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟಂಬರ್ 15ರಂದು ಹಮ್ಮಿಕೊಳ್ಳಲಾದ ಮಾನವ ಸರಪಳಿ ಕಾರ್ಯಕ್ರಮಕ್ಕಾಗಿ ವಿವಿಧ ಸಮಿತಿಗಳನ್ನು ರಚನೆ ಮಾಡಿ ಈ ಎಲ್ಲಾ ಸಮಿತಿಗಳಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ.

ವಿವಿಧ ಇಲಾಖೆಗಳ ಸಹಬಾಗಿತ್ವದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ನ ದಿನಾಚರಣೆ ಅಂಗವಾಗಿ ಬೀದರನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ಸಂಬಂಧ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಸರ್ಕಾರವು ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸೆಪ್ಟಂಬರ್ 15ರಂದು ಬೆಳಿಗ್ಗೆ 08 ರಿಂದ 09:30 ಗಂಟೆಯವರೆಗೆ ಕೊಪ್ಪಳ ಜಿಲ್ಲೆಯ ರಾಜ್ಯ ಹೆದ್ದಾರಿ ಬೆಳಗಟ್ಟಿ (ಹಟ್ಟಿ ಗ್ರಾಮಪಂಚಾಯತಿ) ಗ್ರಾಮದಿಂದ ಪ್ರಾರಂಭವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಕೊಪ್ಪಳ ಭೌಗೋಳಿಕ ಸರಹದ್ದಾದ ಮುನಿರಾಬಾದ್ ಡ್ಯಾಮ್ ವರೆಗೆ ಒಟ್ಟು ೫೩ ಕಿ.ಮೀ. ಮಾನವ ಸರಪಳಿ ನಿರ್ಮಿಸಲು ಅಗತ್ಯ ಸುರಕ್ಷತೆ ಜೊತೆಗೆ ಕಾರ್ಯಕ್ರಮದ ಸುವ್ಯವಸ್ಥಿತವಾಗಿ ಹಮ್ಮಿಕೊಳ್ಳಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ.

ಸಾರಿಗೆ ಸಮಿತಿ : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮಕ್ಕಾಗಿ ಸಾರಿಗೆ ಸಮಿತಿಯನ್ನು ಕೊಪ್ಪಳ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದು, ಕೊಪ್ಪಳ ತಹಶಿಲ್ದಾರರು, ನಗರಸಭೆ ಪೌರಾಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹಾಗೂ ಸಮಿತಿ ಬಯಸುವ ಇತರೇ ಅಧಿಕಾರಿಗಳು ಸದಸ್ಯರಾಗಿದ್ದಾರೆ ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

ಸಾರಿಗೆ ಸಮಿತಿಯು ಮಾನವ ಸರಪಳಿ ನಿರ್ಮಿಸಲಾದ ಸ್ಥಳಕ್ಕೆ, ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಕರೆತರುವದು ಮತ್ತು ಕಾರ್ಯಕ್ರಮ ಮುಗಿದ ನಂತರ ಸುರಕ್ಷಿತವಾಗಿ ಅವರ ಕೇಂದ್ರಸ್ಥಾನಕ್ಕೆ ಮರಳಿಸುವದು. ಮಾನವ ಸರಪಳಿ ಹೊರಡುವ ಮಾರ್ಗಗಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಂದ ವಿವಿಧ ಸಂಘ ಸಂಸ್ಥೆಗಳ ಸದಸ್ಯರಿಗೆ, ಮಹಿಳಾ ಒಕ್ಕೂಟಗಳ ಸದಸ್ಯರಿಗೆ, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸೂಕ್ತ ವಾಹನ ವ್ಯವಸ್ಥೆ ಕಲ್ಪಿಸಬೇಕು.

ಆಹಾರ ಮತ್ತು ಕುಡಿಯುವ ನೀರು ಪೂರೈಕೆ ಸಮಿತಿ : ಪಿ.ಎಂ ಪೋಷಣ ಅಭಿಯಾನದ ಜಿಲ್ಲಾ ಶಿಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಹಾರ ಮತ್ತು ಕುಡಿಯುವ ನೀರು ಪೂರೈಕೆ ಸಮಿತಿಯನ್ನು ರಚಿಸಿದ್ದು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು, ಕೊಪ್ಪಳ ತಾ.ಪಂ ನರೇಗಾ ಸಹಾಯಕ ನಿರ್ದೇಶಕರು ಸದಸ್ಯರಾಗಿದ್ದಾರೆ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

ಆಹಾರ ಮತ್ತು ಕುಡಿಯುವ ನೀರು ಪೂರೈಕೆ ಸಮಿತಿಯು ಮಾನವ ಸರಪಳಿ ಕಾರ್ಯಕ್ರಮಕ್ಕೆ ಆಗಮಿಸುವ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗಳಿಗೆ ಅಲ್ಪೋಪಹಾರ ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಕೈಗೊಳ್ಳುವದು. ಮಾನವ ಸರಪಳಿ ಹೊರಡುವ ಮಾರ್ಗಗಳ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳು, ಪಿಡಿಓ ರವರ ಸಹಭಾಗಿತ್ವದಲ್ಲಿ ಕರ್ತವ್ಯಗಳನ್ನು ನಿಭಾಯಿಸಬೇಕು.

ಸುರಕ್ಷತಾ ಸಮಿತಿ : ಪೋಲಿಸ್ ಉಪಾಧೀಕ್ಷಕರ ಅಧ್ಯಕ್ಷತೆಯಲ್ಲಿ ಸುರಕ್ಷತಾ ಸಮಿತಿಯನ್ನು ರಚಿಸಿದ್ದು, ಕೊಪ್ಪಳ ನಗರ ಆರಕ್ಷಕ ವೃತ್ತ ನೀರಿಕ್ಷಕರು, ಅಳವಂಡಿ ಆರಕ್ಷಕ ವೃತ್ತ ನೀರಿಕ್ಷಕರು, ಕೊಪ್ಪಳ ನಗರಸಭೆ ಪೌರಾಯುಕ್ತರು, ಭಾಗ್ಯನಗರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಸದಸ್ಯರಾಗಿದ್ದಾರೆ.

ಸುರಕ್ಷತಾ ಸಮಿತಿಯು ಕೊಪ್ಪಳ ಜಿಲ್ಲೆಗೆ ಮಾನವ ಸರಪಳಿ ಪ್ರಾರಂಭಿಸಲಾದ ಸ್ಥಳದಿಂದ ಜಿಲ್ಲೆಯ ಸರಹದ್ದು ಮುಕ್ತಾಯದವರೆಗೆ ಸರಪಳಿ ಉದ್ದಕ್ಕೂ ಸೂಕ್ತ ಪೋಲಿಸ್ ಬಂದೋಬಸ್ತು ಒದಗಿಸಬೇಕು. ಮಾನವ ಸರಪಳಿ ಕಾರ್ಯಕ್ರಮದ ಉದ್ದಗಲಕ್ಕೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ವಾಹನ. ಸಂಚಾರ ಸುಗಮವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಲಾ ಕಾಲೇಜು ವಿದ್ಯಾರ್ಥಿಗಳು, ಎಲ್ಲ ಸಾರ್ವಜನಿಕರಿಗೂ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಸಿಬ್ಬಂದಿಗಳನ್ನು ನೇಮಿಸಿಕೊಂಡು ಸೂಕ್ತ ಬಂದೋಬಸ್ತ್ ಒದಗಿಸಬೇಕು.

ಆರೋಗ್ಯ ಸಮಿತಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಸಮಿತಿಯನ್ನು ರಚಿಸಿದ್ದು, ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು, ನಗರಸಭೆ ಆರೋಗ್ಯ ನೀರಿಕ್ಷಕರು ಸದಸ್ಯರಾಗಿದ್ದಾರೆ.

ಆರೋಗ್ಯ ಸಮಿತಿಯು ಮಾನವ ಸರಪಳಿ ಕಾರ್ಯಕ್ರಮಕ್ಕೆ ಆಗಮಿಸಿದ ವಿದ್ಯಾರ್ಥಿಗಳು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಪ್ರತಿ ೦೫ ಕೀ.ಮೀ ಒಂದರAತೆ ಅಗತ್ಯ ಸಿಬ್ಬಂದಿಯೋAದಿಗೆ ಅಂಬೂಲೆನ್ನು ವ್ಯವಸ್ಥೆ ಮಾಡಬೇಕು. ಮಾನವ ಸರಪವಳಿ ಪ್ರಾರಂಭವಾಗುವ ಸ್ಥಳದಿಂದ ಮುಕ್ತಾಯದ ವರೆಗೂ ವಿದ್ಯಾರ್ಥಿಗಳು, ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ವೈದ್ಯಕೀಯ ಕಿಟ್ ನೊಂದಿಗೆ ಮಹಿಳಾ ಶುಶ್ರೂಷಕರನ್ನು ನೇಮಿಸಿಕೊಳ್ಳಬೇಕು. ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಅಗತ್ಯ ಕ್ರಮವಹಿಸಿ.

ನೈಮಲೀಕರಣ ಮತ್ತು ಶುಚಿತ್ವ ಸಮಿತಿ : ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನೈಮಲೀಕರಣ ಮತ್ತು ಶುಚಿತ್ವ ಸಮಿತಿಯನ್ನು ರಚಿಸಿದ್ದು, ನಗಗರಾಭಿವ್ಯದಿ ಇಲಾಖೆಯ ಯೋಜನಾ ನಿರ್ದೇಶಶಕರು, ಕೊಪ್ಪಳ ನಗರಸಭೆ ಪೌರಾಯುಕ್ತರು, ಭಾಗ್ಯನಗರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಹಾಗೂ ಸಂಬAಧಿಸಿದ ಗ್ರಾಮ ಪಂಚಾಯತಿ ಪಿ.ಡಿ.ಓ.ಗಳು ಸದಸ್ಯರಾಗಿದ್ದಾರೆ.
ನೈಮಲೀಕರಣ ಮತ್ತು ಶುಚಿತ್ವ ಸಮಿತಿಯು ಮಾನವ ಸರಪಳಿ ನಿರ್ಮಾಣವಾಗುವ ಸ್ಥಳದಿಂದ ಮುಕ್ತಾಯಗೊಳ್ಳುವವರೆಗೂ ಸ್ಥಳದಲ್ಲಿ ಎರಡು ದಿನ ಮುಂಚಿತವಾಗಿ ಸ್ವಚ್ಛತೆಯನ್ನು ಕೈಗೊಳ್ಳಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಸ್ವಚ್ಛತೆ ಹಿತದೃಷ್ಟಿಯಿಂದ ಮಾನವ ಸರಪಳಿ ಉದ್ದಕ್ಕೂ ಅಗತ್ಯಕ ತಕ್ಕಂತೆ ಮುಂಜಾಗೃತವಾಗಿ ಕಸ ವಿಲೇವಾರಿ ವಾಹನವನ್ನು ಬಳಸಿಕೊಳ್ಳಬೇಕು. ಕಾಯಕ್ರಮದಲ್ಲಿ ಭಾಗವಹಿಸುವ ಎಲ್ಲರ ಆರೋಗ್ಯದ ಹಿತದೃಷ್ಟಿಯಿಂದ ಶುಚಿತ್ವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.

ಪ್ರಚಾರ ಸಮಿತಿ : ಜಿಲ್ಲಾ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಅಧಿಕಾರಿಗಳ (ಎನ್.ಆಯ್.ಸಿ) ಅಧ್ಯಕ್ಷತೆಯಲ್ಲಿ ಪ್ರಚಾರ ಸಮಿತಿಯನ್ನು ರಚಿಸಿದ್ದು, ಜಿಲ್ಲಾ ವಿಪ್ಪತ್ತು ನಿರ್ವಹಣಾ ಸಮಾಲೋಚಕರು, ಯಲಬುರ್ಗಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಮತ್ತು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳು ಸದಸ್ಯರಾಗಿದ್ದಾರೆ.

ಪ್ರಚಾರ ಸಮಿತಿಯು ಸೆಪ್ಟೆಂಬರ್ ೧೫ರಂದು ಬೆಳಿಗ್ಗೆ ೦೮.೩೦ ಗಂಟೆಯಿAದ ಕೊಪ್ಪಳ ಜಿಲ್ಲೆಯ ರಾಜ್ಯ ಹೆದ್ದಾರಿ ಬೆಳಗಟ್ಟಿ (ಹಟ್ಟಿ ಗ್ರಾಮಪಂಚಾಯತಿ) ಗ್ರಾಮದಿಂದ ಪ್ರಾರಂಭವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಕೊಪ್ಪಳ ಭೌಗೋಳಿಕ ಸರಹದ್ದಾದ ಮುನಿರಾಬಾದ್ ಡ್ಯಾಮ್ ವರೆಗೆ ಒಟ್ಟು ೫೩ ಕಿಮೀ ಮಾನವ ಸರಪಳಿ ರಚಿಸುವ ಸಂಬಂದ ಜಿಲ್ಲೆಯ ಎಲ್ಲ ಗ್ರಾಮಗಳು ಮತ್ತು ನಗರ ಪ್ರದೇಶ ವ್ಯಾಪ್ತಿಯ ಕಾರ್ಯಕ್ರಮ ಆಯೋಜಿಸಿರುವ ಬಗ್ಗೆ, ವ್ಯಾಪಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಕೈಗೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಡಿಜಿಟಲ್ ತಂತ್ರಾಂಶ ಮೂಲಕ ಕಾರ್ಯಕ್ರಮ ಆಯೋಜನೆ ಬಗ್ಗೆ, ಪ್ರಚಾರ ಪಡಿಸಿ. ಕಾರ್ಯಕ್ರಮ ಆಯೋಜನೆ ಹಾಗೂ ಮುಂಜಾಗ್ರತವಾಗಿ ತೆಗೆದುಕೊಂಡಿರುವ ಕ್ರಮಗಳ ಬಗೆ, ದಿನಪತ್ರಿಕೆಗಳಲ್ಲಿ ಸುದ್ದಿಯನ್ನು ಪ್ರಕಟಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಕಾಯಕ್ರಮದ ಪ್ರಾರಂಭದಿAದ ಮತ್ತು ಮುಕ್ತಾಯ ಹಂತದವರೆಗಿನ ಎಲ್ಲ ಅಂಶಗಳನ್ನು ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ಕ್ರಮ ಕೈಗೊಳ್ಳಬೇಕು.

ಎಲ್ಲಾ ಸಮಿತಿಗಳು ತಮ್ಮ ಕರ್ತವ್ಯಗಳ ಜೊತೆಗೆ ಜಿಲ್ಲಾಧಿಕಾರಿಗಳು, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಮಿತಿಗೆ ಸೂಚಿಸುವ ಇತರೇ ಕಾರ್ಯಗಳು, ಸಮಿತಿ ಬಯಸುವ ಅಗತ್ಯ ಸಿಬ್ಬಂದಿಗಳನ್ನು ಪಡೆಯಬೇಕು. ಸಮಿತಿಗಳಿಗೆ ಒದಗಿಸಲಾದ ಮತ್ತು ಕಾಲಕಾಲಕ್ಕೆ ಸರ್ಕಾರದಿಂದ ನೀಡುವ ನಿರ್ದೇಶನಗಳನ್ನು ಅಚ್ಚುಕಟ್ಟಾಗಿ ಪಾಲಿಸಬೇಕು. ಒಂದು ವೇಳೆ ಕಾರ್ಯಕ್ರಮ ಅನುಷ್ಟಾನದಲ್ಲಿ ವಿಫಲತೆ, ಬೇಜವಾರಿ ತೋರಿದ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ನಿಯಮಾಮಸಾರ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!