7

ಜ್ಞಾನ ಬಂಧು ಸಂಸ್ಥೆಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರಿಜಿ ಜಯಂತಿ ಆಚರಣೆ

ಕರುನಾಡ ಬೆಳಗು ಸುದ್ದಿ

ಭಾಗ್ಯನಗರ, 2- ಪಟ್ಟಣದಜ್ಞಾನ ಬಂಧುಸಂಸ್ಥೆಯಲ್ಲಿ ಬುಧವಾರದಂದುಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಯವರಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕಜಯಂತಿಯನ್ನುಆಚರಿಸಲಾಯಿತು.

ಕಾರ್ಯಕ್ರಮದಲ್ಲಿಶಾಲಾ ಶಿಕ್ಷಕಿ ಶ್ರೀಮತಿ ಪದ್ಮಶ್ರೀ ಅವರು ಮಾತನಾಡಿ ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರಜೀವನ ಮತ್ತು ಸಾಧನೆಗಳನ್ನು ಹೇಳಿದರು.

ಕಾರ್ಯಕ್ರಮದಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯಅಧ್ಯಕ್ಷರಾದದಾನಪ್ಪಕವಲೂರು ಮಾತನಾಡಿ “ಗಾಂಧೀಜಿಯವರ ಮಾನವೀಯ ಮೌಲ್ಯಗಳು, ಸರಳತೆ ಹಾಗೂ ಸುವಿಚಾರಗಳನ್ನು ನಮ್ಮೆಲ್ಲರ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಅಂದಾಗಲೇ ನಾವು ಪರಿಪೂರ್ಣರಾಗಲು ಸಾಧ್ಯ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಹಾಗೂ ಶಿಕ್ಷಕರಿಂದ ಗಾಂಧೀಜಿಯವರ ಪ್ರೇರಿತಗೀತೆಯಾದ ‘ರಘುಪತಿರಾಘವರಾಜಾರಾಮ್’ ಭಜನೆಯನ್ನುಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದರ ಶ್ರೀಮತಿ ಲಿಲಿಯನ್ ಆಂಟೋನಿ ಎಸ್, ಉಪಪ್ರಾಂಶುಪಾಲರಾದ ಶ್ರೀಮತಿ ಜ್ಯೋತಿ ಎಸ್.ಎಸ್. ಕಾಲೇಜಿನ ಪ್ರಾಂಶುಪಾಲ ವಿಶ್ವನಾಥಜಿ.ಎಸ್, ಸಂಸ್ಥೆಯ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ನಂತರದಲ್ಲಿ ಸಂಸ್ಥೆಯ ಆವರಣದಲ್ಲಿ ಶ್ರಮಧಾನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

ಶಿಕ್ಷಕಿ ಶ್ರೀಮತಿ ಸಾವಿತ್ರಿ ಕೆ.ಬಿ. ಕಾರ್ಯಕ್ರಮವನ್ನು ನಿರೂಪಿಸಿದರು, ಹಾಗೂ ಶಿಕ್ಷಕಿಕುಮಾರಿ ಅಖಿಲಾ ಬೇಗಂ ಸ್ವಾಗತಿಸಿ, ಕುಮಾರಿ ಸಂಗೀತಾ ಹಿರೇಮಠ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!